Friday, September 18, 2026

ರಮೇಶ್ ಕಾಂಚನ್ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ

ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬಿ.ಎಲ್.ಎ-2ಗಳಿಂದ (BLA-2) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (SIR) ಪ್ರಥಮ ಹಂತದ ಮಾಹಿತಿಯನ್ನು ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಎ. ಸಿ ವಿನಯರಾಜ್ ಅವರು ಆಗಮಿಸಿ ಅಂಕಿ ಅಂಶಗಳನ್ನು ಪಡೆದು ಮುಂದಿನ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿ.ಎಲ್.ಎ-2ಗಳ ಕರ್ತವ್ಯದ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ಎಲ್ಲಾ ಬಿ.ಎಲ್.ಎ-2ಗಳು ಸಕ್ರಿಯವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಯುವಕರನ್ನು ಸಂಘಟನೆಯ ಮೂಲಕ ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಭಾರತ್ ಜೋಡೋ ಯುವಕರ ಸಂಘಟನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ಬೂತ್‌ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35ರ ವಯೋಮಿತಿಯ ಯುವಕ‌ ಯುವತಿಯರನ್ನು ನೋಂದಾಯಿಸಲು ಮುತುವರ್ಜಿ ವಹಿಸಬೇಕೆಂದು ಕರೆ ನೀಡಿದರು.

ಈ ಸಭೆಯಲ್ಲಿ ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ,  ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬಿ.ಎಲ್.ಎ-2ಗಳು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸತೀಶ್ ಕೊಡವೂರು ಅವರು ವಂದಿಸಿದರು

More like this
Related

ಲಾಹೋರ್ ಸಭೆಗಳು: ಭಾರತಕ್ಕೆ ಬಹುಮುಖ ಮಾದಕವಸ್ತು ಕಳ್ಳಸಾಗಣೆ ಹೆಚ್ಚಿಸಲು ಐಎಸ್‌ಐ ಯೋಜನೆ?

ನವದೆಹಲಿ: ಮಾದಕವಸ್ತುಗಳ ವಿರುದ್ಧದ ಹೋರಾಟವು 2026-29ರ ಅವಧಿಯಲ್ಲಿ ತೀವ್ರ ‘ಮಿಷನ್ ಮೋಡ್’ಗೆ...

ಮಣಿಪಾಲದಲ್ಲಿ 30 ಗ್ರಾಂ MDMA ಸಹಿತ ಇಬ್ಬರ ಬಂಧನ

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ...

ಗಣೇಶನನ್ನು ಪೂಜಿಸುವುದು ಪ್ರಕೃತಿಯ ಆರಾಧನೆ: ಧರ್ಮದರ್ಶಿ ಸಗ್ರಿ ಗೋಪಾಲಕೃಷ್ಣ ಸಾಮಗ ಅಭಿಪ್ರಾಯ

ಉಡುಪಿ: ನಾವಿರುವ ಪ್ರಕೃತಿಯೇ ದೇವರಾಗಿದೆ. ದೇವಿ ಪಾರ್ವತಿಯ ಮೂಲಕ ಪ್ರಕೃತಿಯಲ್ಲಿ ಜನಿಸಿದ...

ಕರಾವಳಿ ಭಾಗದ 30–40 ವರ್ಷಗಳ ಬೇಡಿಕೆಗಳತ್ತ ಸರ್ಕಾರದ ಗಮನ : ಡಿ.ಕೆ.ಶಿವಕುಮಾರ್

ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ...

Copying is disabled on Udupi Digital News.