Friday, July 3, 2026

ನಾಳೆ (ಜು.4ರಂದು) ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರು: ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ಎಸ್ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಜುಲೈ 4ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ.

2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.

ಮಾಜಿ ಸಚಿವ ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕರಾದ ಕೃಷ್ಣ ಜೆ.ಪಾಲೇಮಾರ್ ಗೌರವ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ* ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಬ್ಯಾಂಕಿನ ಪ್ರಕಟನೆ ತಿಳಿಸಿದೆ.

More like this
Related

ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳದ ಪೈನ್ನೂರಿಗೆ ಕುಟುಂಬದೊಂದಿಗೆ ತೆರಳುತ್ತಿದ್ದ ವಿಕಾಸ್ ಸುಬ್ಬುರಾವ್ ಧನವಡೆ...

ಗಾಂಜಾ ಸೇವನೆ ಆರೋಪ: ಯುವಕನ ಬಂಧನ

ಮಂಗಳೂರು: ನಗರದ ಹೊಯ್ಗೆ ಬಜಾರ್ ಸಮೀಪ ಗಾಂಜಾ ಸೇವನೆ ಮಾಡಿದ ಆರೋಪದ...

ಇಡಿ ಮೇಲಿನ ದಾಳಿ ಪ್ರಕರಣ: ಸಿಬಿಐ ತನಿಖೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕೊಚ್ಚಿ: ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಅವರ ಪುತ್ರಿಯ ಬಾಡಿಗೆ...

ರಾಮನಗರದಲ್ಲಿ ಎಸ್‌ಐಆರ್‌ ನಿಯಮ ಉಲ್ಲಂಘನೆ ಆರೋಪ: ಕುಮಾರಸ್ವಾಮಿ ಆರೋಪ

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ವಿಶೇಷ ಮತದಾರರ ಪಟ್ಟಿಯ...

Copying is disabled on Udupi Digital News.