- ಭಕ್ತರಿಗೆ ಸಿಹಿತಿಂಡಿ, ತಂಪುಪಾನೀಯ ವಿತರಿಸಿದ ಯುವ ಕಾಂಗ್ರೆಸ್ ಮುಖಂಡರು
ಬ್ರಹ್ಮಾವರ: ಬ್ರಹ್ಮಾವರದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಭಕ್ತರಿಗೆ ಸಿಹಿತಿಂಡಿ ಹಾಗೂ ತಂಪುಪಾನೀಯ ವಿತರಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಲಾಯಿತು.
ಶೇಡ್ಸ್ ಅಮಿಗೋಸ್ (Shades Amigos) ಹೇರ್ ಸಲೂನ್, ಬ್ರಹ್ಮಾವರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಫ್ತಾಬ್ ಅಬ್ದುಲ್ ರಜಾಕ್ ಮತ್ತು ಅವರ ತಂಡದ ವತಿಯಿಂದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ಸಿಹಿತಿಂಡಿ ಹಾಗೂ ತಂಪುಪಾನೀಯ ವಿತರಿಸಲಾಯಿತು.
ಸರ್ವಧರ್ಮ ಸೌಹಾರ್ದತೆ ಹಾಗೂ ಪರಸ್ಪರ ಸಹಬಾಳ್ವೆಯನ್ನು ಬಿಂಬಿಸುವ ಇಂತಹ ಸಮಾಜಮುಖಿ ಕಾರ್ಯಗಳು ಯುವ ಕಾಂಗ್ರೆಸ್ ವತಿಯಿಂದ ಇನ್ನಷ್ಟು ನಡೆಯಬೇಕಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಗಣೇಶೋತ್ಸವದಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪರಸ್ಪರ ಗೌರವ ಮತ್ತು ಸೌಹಾರ್ದತೆಯೊಂದಿಗೆ ಪಾಲ್ಗೊಳ್ಳುವ ಮೂಲಕ ಸಮಾಜದಲ್ಲಿ ಏಕತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಮತ್ತಷ್ಟು ಬಲಪಡಿಸಬಹುದು ಎಂದು ತಿಳಿಸಲಾಯಿತು.




