Thursday, September 17, 2026

ತೊಟ್ಟಂ ಗಣೇಶೋತ್ಸವದಲ್ಲಿ ಸೌಹಾರ್ದತೆಯ ಸಂದೇಶ: ಚರ್ಚ್ ಪ್ರತಿನಿಧಿಗಳಿಂದ ಪರಸ್ಪರ ಶುಭಾಶಯ ವಿನಿಮಯ

ಮಲ್ಪೆ: ಕೋಮು ಸೌಹಾರ್ದತೆ, ಪರಸ್ಪರ ಗೌರವ ಹಾಗೂ ಸ್ನೇಹದ ಸಂದೇಶ ಸಾರುವ ನಿಟ್ಟಿನಲ್ಲಿ ತೊಟ್ಟಂನ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ವಂ. ಫಾ. ಹೆನ್ರಿ ಮಸ್ಕರೇನ್ಹಸ್ ಹಾಗೂ ಉಡುಪಿ ವಲಯದ ಪ್ರಧಾನ ಧರ್ಮಗುರು, ಶೋಕಮಾತಾ ಚರ್ಚಿನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ. ಡೆನಿಸ್ ಡಿಸಾ ಹಾಗೂ ಕ್ರೈಸ್ತ ಬಾಂಧವರು ತೊಟ್ಟಂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ತೊಟ್ಟಂನಲ್ಲಿ ಗಣೇಶೋತ್ಸವ ಆಚರಣೆಗೆ 50 ವರ್ಷಗಳು ಪೂರ್ಣಗೊಂಡಿದ್ದು, ಸಮಿತಿ ಈ ಬಾರಿ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ವಿಶೇಷ ಮಹತ್ವ ಪಡೆದುಕೊಂಡಿತು.

ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕೆ. ಸಾಲ್ಯಾನ್ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಚರ್ಚ್ನ ಪ್ರತಿನಿಧಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಧರ್ಮಗುರುಗಳು ಹಾಗೂ ಗಣ್ಯರನ್ನು ಶಾಲು ಹೊದಿಸಿ ಗೌರವಿಸಲಾಯಿತು.

ಎರಡೂ ಸಮುದಾಯಗಳ ಪ್ರತಿನಿಧಿಗಳು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು, ಗಣೇಶೋತ್ಸವದ ಸುವರ್ಣ ಮಹೋತ್ಸವದ ಆಚರಣೆ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ವಿವಿಧ ಧರ್ಮಗಳ ಜನರು ಪರಸ್ಪರ ಗೌರವ, ಸ್ನೇಹ ಮತ್ತು ಸಹೋದರತ್ವದಿಂದ ಬದುಕುತ್ತಿರುವ ತೊಟ್ಟಂನ ಸೌಹಾರ್ದ ಪರಂಪರೆಗೆ ಈ ಭೇಟಿ ಮತ್ತೊಂದು ಉತ್ತಮ ಉದಾಹರಣೆಯಾಯಿತು. ಹಲವು ವರ್ಷಗಳಿಂದ ಸ್ಥಳೀಯವಾಗಿ ಬೆಳೆದು ಬಂದಿರುವ ಪರಸ್ಪರ ಬಾಂಧವ್ಯ ಹಾಗೂ ಒಗ್ಗಟ್ಟನ್ನು ಈ ಸಂದರ್ಭದಲ್ಲಿ ಪ್ರತಿನಿಧಿಗಳು ಸ್ಮರಿಸಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ವಿವಿಧ ಧರ್ಮಗಳ ನಡುವಿನ ಉತ್ತಮ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಈ ಭೇಟಿ ಸಾರಿತು. ತೊಟ್ಟಂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸುವರ್ಣ ಮಹೋತ್ಸವ ಆಚರಣೆ ಯಶಸ್ವಿಯಾಗಲಿ ಹಾಗೂ ಮುಂದಿನ ದಿನಗಳಲ್ಲಿಯೂ ಪ್ರದೇಶದಲ್ಲಿ ಏಕತೆ, ಸಹೋದರತ್ವ ಮತ್ತು ಪರಸ್ಪರ ಗೌರವದ ಮನೋಭಾವ ಮತ್ತಷ್ಟು ಗಟ್ಟಿಯಾಗಲಿ ಎಂದು ಎರಡೂ ಸಮುದಾಯಗಳ ಪ್ರತಿನಿಧಿಗಳು ಹಾರೈಸಿದರು.

ತೊಟ್ಟಂ ಚರ್ಚಿನ ಪಾಲನಾ ಪರಿಷತ್ ನ ಉಪಾಧ್ಯಕ್ಷರಾದ ಲೆಸ್ಲಿ ಆರೋಜಾ, ಪಾಲನಾ ಪರಿಷತ್ ನ ಸದಸ್ಯರು, ಹಾಗೂ ತೊಟ್ಟಂ ಸಂತ ಅನ್ನಮ್ಮ ಕಾನ್ವೆಂಟಿನ ಧರ್ಮಭಗಿನಿಯರು ಈ ಸಂದರ್ಭದಲ್ಲಿ ಧರ್ಮಗುರುಗಳೊಂದಿಗೆ ಉಪಸ್ಥಿತರಿದ್ದರು.

More like this
Related

ಮಣಿಪಾಲದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಕಿರುಕುಳ, ಬ್ಲ್ಯಾಕ್ ಮೇಲ್ ಮಾಡಿದ ಯುವಕನ ಬಂಧನ

ಉಡುಪಿ: ಮಣಿಪಾಲದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣಕ್ಕೆ...

ಕಸ್ತೂರಿ ರಂಗನ್ ಅಧಿಸೂಚನೆ ಜತೆಗೆ 2017ರ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯನ್ನೂ ಹಿಂಪಡೆಯಲಿ

ಏಳನೇ ಅಧಿಸೂಚನೆ ವಿರೋಧ ಮಾತ್ರ ಸಾಕಾಗದು: ಟಿ.ಬಿ. ಶೆಟ್ಟಿ ಕುಂದಾಪುರ: ಕಸ್ತೂರಿ ರಂಗನ್...

ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪ ರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು...

Copying is disabled on Udupi Digital News.