ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ರವರಿಗೆ ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್,ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಪ್ರಭಾಕರ ಪೂಜಾರಿ, ದಿನಕರ ಬಾಬು, ದಿನೇಶ್ ಅಮೀನ್, ರಾಜೀವ್ ಕುಲಾಲ್, ಶ್ರೀಕಾಂತ ನಾಯಕ್ ಅಲೆವೂರು, ರೇಷ್ಮಾ ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.




