Monday, September 14, 2026

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನ ಕೊಲೆ

ಉಡುಪಿ: ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕಾರ್ಮಿಕನೊಬ್ಬನನ್ನು ಕೊಲೆಗೈದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಮೃತ ಯುವಕನನ್ನು ಮೀನು ಕಾರ್ಮಿಕ ಅಭಿಷೇಕ್ ಎಂದು ಗುರುತಿಸಲಾಗಿದೆ.

ಬೋಟ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಹ ಮೀನು ಕಾರ್ಮಿಕನೊಬ್ಬ ಅಭಿಷೇಕ್ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಮೂಲದ ಹಾಗೂ ಮಲ್ಪೆಯಲ್ಲಿ ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಯ ದೃಷ್ಟಿಯಿಂದ ವಶಕ್ಕೆ ಪಡೆದಿರುವ ಯುವಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ವಿವರಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ವಿಚಾರಣೆ ಮುಂದುವರಿದಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.