Tuesday, July 28, 2026

ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ

ಉಡುಪಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ ಸರ್ವಾಧಿಕಾರಿ ಧೋರಣೆ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಲಾಠಿ ಪ್ರಹಾರ ಮತ್ತು ಅಶ್ರುವಾಯು ಪ್ರಯೋಗ ನಡೆಸಿರುವುದು ಖಂಡನೀಯ ಎಂದು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ತೀವ್ರವಾಗಿ ಖಂಡಿಸಿದ್ದಾರೆ.

ನೀಟ್ ಪರೀಕ್ಷೆಯ ಅಕ್ರಮಗಳಿಂದಾಗಿ ದೇಶದಲ್ಲಿ ಸುಮಾರು 30 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರಿಸದಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರೇ ನೇರ ಹೊಣೆ ಹೊರಬೇಕು. ದೇಶದ ಯುವಜನರು ಬೆರಳಿನಿಂದ ಮತ ಹಾಕಿದರೆ, ಬಿಜೆಪಿ ಸರ್ಕಾರ ಆ ಯುವಕರ ಬೆರಳನ್ನೇ ಮುರಿಯುವ ಕೆಲಸ ಮಾಡುತ್ತಿದೆ

ನೀಟ್ ಸೇರಿದಂತೆ ಸೂಕ್ಷ್ಮ ವಿಷಯದ ಬಗ್ಗೆ ಚರ್ಚೆಗೆ ಸಂಸತ್ತಿನಲ್ಲಿ ಅವಕಾಶ ನೀಡುತ್ತಿಲ್ಲ. ಪ್ರತಿಪಕ್ಷದವರುವರು ಮಾತನಾಡಲು ನಿಂತರೆ ಅವರನ್ನು ಆಡಳಿತ ಪಕ್ಷದವರು ಹಗುರವಾಗಿ ನಡೆದುಕೊಳ್ಳುತ್ತಾರೆ. ಹೋರಾಟಕ್ಕೆ ಯಾವುದೇ ಜಾತಿ, ಮತ, ಧರ್ಮವಿಲ್ಲ. ದೇಶದ ಯುವಕರು ತಮ್ಮ ಭವಿಷ್ಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಪ್ರತಿಯೊಬ್ಬರ ಬೆಂಬಲ ಅಗತ್ಯವಾಗಿದೆ. ಬಿಜೆಪಿ ಭಾವನಾತ್ಮಕವಾಗಿ ಯುವಕರನ್ನು ಬಳಸಿಕೊಳ್ಳುತ್ತಿದೆ ಆದರೆ ಅದೇ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಡ ಆಡುತ್ತಿದ್ದಾರೆ..
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಅಂತಹ ಪ್ರತಿಭಟನೆ ನಡೆಸಿದ ಸೋನಮ್ ವಾಂಗ್ಚುಕ್ ಅವರನ್ನು ಬಂಧಿಸಿರುವುದು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಸರಿಯಲ್ಲ.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರಕಾರ ತನ್ನ ಹಠಮಾರಿ ಧೋರಣೆಯನ್ನು ಕೈಬಿಟ್ಟು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯಬೇಕು. ದೇಶದ ಯುವಜನರ ಭವಿಷ್ಯದ ಕನಸುಗಳನ್ನು ಚಿವುಟುವ ಕಾರ್ಯವನ್ನು ಮುಂದುವರೆಸಿದರೆ ಇದನ್ನು ದೇಶದ ಜನತೆ ಗಮನಿಸುತ್ತಿದ್ದು ಮುಂಬರುವ ದಿನದಲ್ಲಿ ಕೇಂದ್ರ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.

ಸರ್ಕಾರವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಗೌರವಿಸಿ ಸೋನಮ್ ವಾಂಗ್ಚುಕ್ ಅವರ ವಿರುದ್ಧ ಕೈಗೊಂಡಿರುವ ಕ್ರಮ ಕೂಡಲೇ ಹಿಂಪಡೆಯಬೇಕು. ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯುವ ಜತೆಗೆ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

More like this
Related

ದೇಶದಲ್ಲಿ ಚಳುವಳಿ ಹೆಸರಿನಲ್ಲಿ ಅರಾಜಕತೆ ಸೃಷ್ಟಿಸುವವರ ವಿರುದ್ದ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಚಳುವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಕಾಕ್ರೋಚ್...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ

ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶದ ಲಕ್ಷಾಂತರ...

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ ಬಲವಂತದ ಕ್ರಮ ಬೇಡ – ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ನಡೆದ...

ರಾಜ್ಯದ ಬಾಕಿ ಯೋಜನೆಗಳ ನಿರ್ವಹಣೆಗೆ ದಿಲ್ಲಿಯ ಕರ್ನಾಟಕ ಭವನದಲ್ಲಿ ಹೊಸ ವ್ಯವಸ್ಥೆ ಜಾರಿ : ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ರಾಜ್ಯದ ಮೇಕೆದಾಟು ಅಣೆಕಟ್ಟು ಸೇರಿದಂತೆ ಬಾಕಿ ಯೋಜನೆಗಳ ನಿರ್ವಹಣೆಗೆ...

Copying is disabled on Udupi Digital News.