Monday, September 14, 2026

ಅಲೆವೂರಿನಲ್ಲಿ ಅಧಿಕಾರಿಗಳ ದಾಳಿ: ಕೃತಕ ರಾಸಾಯನಿಕ ಬಳಿಸಿದ 5,000 ಕೆಜಿ ಬಾಳೆಕಾಯಿ ವಶ

ಉಡುಪಿ: ದೇಶದ ಹಲವೆಡೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ಸೇವಿಸಲು ಯೋಗ್ಯವಲ್ಲದ ಆಹಾರ ಉತ್ಪನ್ನಗಳನ್ನು ಪತ್ತೆ ಮಾಡುತ್ತಿರುವ ನಡುವೆಯೇ, ಸಾಮಾನ್ಯರು ಹೆಚ್ಚಾಗಿ ಬಳಸುವ ಬಾಳೆಹಣ್ಣಿಗೂ ಕೃತಕ ಬಣ್ಣ ಹಚ್ಚಿ ಮಾರಾಟ ಮಾಡುತ್ತಿದ್ದ ಜಾಲ ಉಡುಪಿಯಲ್ಲಿ ಬಯಲಾಗಿದೆ.

ಗುರುವಾರ (ಆ.20) ಉಡುಪಿ ತಾಲೂಕಿನ ಅಲೆವೂರಿನಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ (ಎಸಿ) ನೇತೃತ್ವದ ತಂಡ ಬಾಳೆಕಾಯಿ ಮಂಡಿಗೆ ದಾಳಿ ನಡೆಸಿದ್ದು, ಕೃತಕ ಬಣ್ಣ ಹಚ್ಚಿ ಮಾರಾಟಕ್ಕೆ ಸಿದ್ಧಪಡಿಸಿದ್ದ ಸುಮಾರು 5 ಸಾವಿರ ಕೆಜಿ ಬಾಳೆಕಾಯಿಗಳನ್ನು ಸೀಜ್ ಮಾಡಿದೆ. ವಶಪಡಿಸಿಕೊಂಡ ಬಾಳೆಕಾಯಿಗಳ ಮೌಲ್ಯ ಸುಮಾರು 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ

ದಾಳಿ ವೇಳೆ ಬಾಳೆಕಾಯಿಗಳಿಗೆ ಕೃತಕ ಬಣ್ಣ ಹಚ್ಚಲು ಬಳಸುತ್ತಿದ್ದ ರಾಸಾಯನಿಕಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಎಡಿಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಉಪ ವಿಭಾಗಾಧಿಕಾರಿ ರಶ್ಮಿ ನೇತೃತ್ವದ ತಂಡವು ಅಲೆವೂರಿನ ಮೂರು ಕಡೆ ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದು, ಈ ವೇಳೆ ಅಕ್ರಮ ಬಯಲಾಗಿದೆ.

ದಾಳಿ ನಡೆಸಿದ ತಂಡದಲ್ಲಿ ಆರೋಗ್ಯ ಪರಿವೀಕ್ಷಣಾಧಿಕಾರಿ ವಿವೇಕ್ ತಿರುಮಲ, ತಹಶೀಲ್ದಾರ್ ಗುರುರಾಜ್, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕ್ ಭಟ್, ವಿಜಯ ಹಾಗೂ ಆಹಾರ ನಿರೀಕ್ಷಕ ಲೀಲಾನಂದ ಇದ್ದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.