Friday, November 6, 2026

ಪೆರ್ಡೂರು ಪ್ರದೀಪ್ ಪೂಜಾರಿ ಪ್ರಕರಣ: ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ

ಉಡುಪಿ:   ಪ್ರದೀಪ್ ಪೂಜಾರಿ ಮೇಲಿನ ಹಲ್ಲೆ ಮತ್ತು ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ಲಗತ್ತಿಸಲಾಗಿದ್ದು, ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ.

ಇನ್ನು ಆಸ್ಪತ್ರೆಯಲ್ಲಿ ಕಾವಲು ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಲ್ಲಿಸಿದ ವರದಿಯಲ್ಲಿ ಉಲ್ಲೇಖವಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧವೂ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

More like this
Related

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯ ಬರ್ಬರ ಹತ್ಯೆ: ಕ್ಯಾಬ್ ಚಾಲಕ ಬಂಧನ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ...

ನ. 29ರಂದು ಸೋದೆ ಮಠದ ಪರ್ಯಾಯದ ಪೂರ್ವಭಾವಿ ಬಾಳೆ ಮುಹೂರ್ತ

ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಉಡುಪಿಯಲ್ಲಿ ರಾಷ್ಟ್ರಮಟ್ಟದ ‘ಕದಳೀ ವಿಶ್ವದರ್ಶನ’ ಬಾಳೆ...

ಬರ ಪರಿಹಾರ ಬಿಡುಗಡೆ, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಪ್ರಧಾನಿ ಮಧ್ಯಪ್ರವೇಶಕ್ಕೆ ಸಿಎಂ ಮನವಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ನ. 6 ಮತ್ತು 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

ಉಡುಪಿ: ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವವು ನವೆಂಬರ್ 6 ಮತ್ತು...

Copying is disabled on Udupi Digital News.