Sunday, September 13, 2026

MRG ಗ್ರೂಪ್ ಮಾಲೀಕ ಪ್ರಕಾಶ್ ಶೆಟ್ಟಿಯಿಂದ ಐಷಾರಾಮಿ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ಜೆಟ್ ಖರೀದಿ!

ಮಂಗಳೂರು: ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಪಯಣದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿ ಅಮೆರಿಕದಿಂದ ತರಿಸಲಾದ 14 ಆಸನಗಳ Embraer Legacy 650 ಖಾಸಗಿ ವಿಮಾನವನ್ನು ಎಂಆರ್ಜಿ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು.

ಇತ್ತೀಚೆಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಈ ಹೊಸ ವಿಮಾನಕ್ಕೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆಶೀರ್ವಾದ ಪಡೆಯಲಾಯಿತು. ಈ ಸಂಭ್ರಮದ ಕ್ಷಣಕ್ಕೆ ಪ್ರಕಾಶ್ ಶೆಟ್ಟಿ ಅವರ ಕುಟುಂಬ ಸದಸ್ಯರು ಹಾಗೂ ಆಪ್ತರು ಸಾಕ್ಷಿಯಾದರು.

ಆತಿಥ್ಯ, ರಿಯಲ್ ಎಸ್ಟೇಟ್ಸ್ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಎಂಆರ್ಜಿ ಸಮೂಹವನ್ನು ವಿನಯ, * ಪರಿಶ್ರಮ ಹಾಗೂ ದೂರದೃಷ್ಟಿಯೊಂದಿಗೆ ಬೆಳೆಸಿದ ಡಾ. ಪ್ರಕಾಶ್ ಶೆಟ್ಟಿ ಅವರು ಉದ್ಯಮ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಗಳು ಮತ್ತು ದಾನಧರ್ಮಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ದೀರ್ಘ ದೂರದ ಪ್ರಯಾಣ ಸಾಮರ್ಥ್ಯ ಹಾಗೂ ಅತ್ಯಾಧುನಿಕ ಸೌಲಭ್ಯಗಳಿಗೆ ಹೆಸರಾದ ಎಂಬ್ರೇಯರ್ ಲೆಗಸಿ 650 ವಿಮಾನವು ಎಂಆರ್ಜಿ ಸಮೂಹದ ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ವೇಗ ಮತ್ತು ಸಂಪರ್ಕ ಸಾಮರ್ಥ್ಯ ಒದಗಿಸಲಿದ್ದು, ಸಂಸ್ಥೆಯ ಬೆಳವಣಿಗೆ ಹಾಗೂ ಜಾಗತಿಕ ದೃಷ್ಟಿಕೋನದ ಪ್ರತೀಕವಾಗಿ ಮೂಡಿಬಂದಿದೆ. ಈ ಸೇರ್ಪಡೆ ಡಾ. ಪ್ರಕಾಶ್ ಶೆಟ್ಟಿ ಅವರ ಸಾಧನೆಯ ಪಯಣದಲ್ಲಿ ಮತ್ತೊಂದು ಸ್ಮರಣೀಯ ಅಧ್ಯಾಯವಾಗಿದೆ

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.