Monday, September 14, 2026

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ.

ಆರ್ಯಾಪು ಗ್ರಾಮದ ಕುಂಜೂರುಪಂಜ ನಿವಾಸಿ ರಮೇಶ್ ರೈ ಮತ್ತು ಯಶೋಧಾ ದಂಪತಿಯ ಪುತ್ರ ಶಮಿಕ್ ರೈ (20) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಶಮಿಕ್ ಅವರು ಪುತ್ತೂರಿನ ಖಾಸಗಿ ಕಾಲೇಜ್‌ನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಜೊತೆಗೆ ಸಿಎ ಪರೀಕ್ಷೆಗೂ ಸಿದ್ಧತೆ ನಡೆಸುತ್ತಿದ್ದರು. ಕಳೆದ ಹಲವು ಸಮಯದಿಂದ ಶಮಿಕ್ ಜಿಮ್‌ಗೆ ಹೋಗುತ್ತಿದ್ದು, ಎಂದಿನಂತೆ ಶನಿವಾರವೂ ಜಿಮ್‌ಗೆ ತೆರಳಿದ್ದು ಅಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದಿದ್ದು ತಕ್ಷಣವೇ ಆತನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿದ್ದು, ಆ ವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪುತ್ತೂರು ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ. ಓರ್ವ ಸಹೋದರಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಆಸ್ಪತ್ರೆಗೆ ಶಾಸಕ ಅಶೋಕ್ ರೈ ಮತ್ತಿತರ ಗಣ್ಯರು ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.