Tuesday, September 15, 2026

ಪರ್ಯಾಯ ಮಹೋತ್ಸವಕ್ಕೆ ವಿಶೇಷ ಸಹಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ರಮೇಶ್ ಕಾಂಚನ್

ಉಡುಪಿಯಲ್ಲಿ ಜನವರಿ 18 ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವ ನಿಟ್ಟಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿರುವುದಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರ್ಯಾಯ ಸಿದ್ದತೆಯ ಬಗ್ಗೆ ಮಾತುಕತೆ ನಡೆಸಿ ಯಾವುದೇ ಕುಂದುಕೊರತೆಯಾಗದಂತೆ ಸರಿಯಾದ ವ್ಯವಸ್ಥೆ ಕಲ್ಪಿಸಲು ಸಮರೋಪಾದಿಯಲ್ಲಿ ಹಗಲು ರಾತ್ರಿ ಕೆಲಸಮಾಡಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ರವರಿಗೆ ವಿಶೇಷ ಸಹಕಾರ ನೀಡುವಂತೆ ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ರಮೇಶ್ ಕಾಂಚನ್ ಕೃತಜ್ಞತೆ ಸಲ್ಲಿಸಿದ್ದಾರೆ.

More like this
Related

ಕಂಡ್ಲೂರು ಹಳೆ ಸೇತುವೆ ನೆಲಸಮದ ಹುನ್ನಾರದ ಹಿಂದೆ ಭ್ರಷ್ಟಾಚಾರದ ಅನುಮಾನ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ ತೀರ್ಥಹಳ್ಳಿ ಸಂಪರ್ಕ ಮಾಡುವ ರಾಜ್ಯ ಹೆದ್ದಾರಿ ಹಾದು ಹೋಗುವ ವರಾಹಿ...

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.