Monday, September 21, 2026

ತುಳು ಭಾಷೆಗೆ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ: ಸರ್ಕಾರದ ನಿರ್ಧಾರಕ್ಕೆ ಉಡುಪಿ ತುಳುಕೂಟ ಅಭಿನಂದನೆ

ಉಡುಪಿ: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯನ್ನಾಗಿ ಘೋಷಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಉಡುಪಿ ತುಳುಕೂಟ ಸಂತಸ ವ್ಯಕ್ತಪಡಿಸಿದೆ.

ಈ ಕುರಿತು ಉಡುಪಿ ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ತುಳುಕೂಟ ಮತ್ತು ಸಮಸ್ತ ತುಳುವರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಕಳೆದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮೂಲಕ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಕಾಳಜಿ ವಹಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ, ಈ ವಿಚಾರವನ್ನು ಸರ್ಕಾರದ ಮುಂದೆ ನಿರಂತರವಾಗಿ ಮಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಕರಾವಳಿಯ ಎಲ್ಲಾ ಶಾಸಕರಿಗೂ ಜಯಕರ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.

ಅದೇ ರೀತಿ, ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹಾಗೂ ಆಗ್ರಹ ವ್ಯಕ್ತಪಡಿಸಿದ ಅಖಿಲ ಭಾರತ ತುಳುಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ ಹಾಗೂ ದೇಶ-ವಿದೇಶಗಳ ಎಲ್ಲಾ ತುಳು ಸಂಘ-ಸಂಸ್ಥೆಗಳಿಗೂ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

“ಸಮಸ್ತ ತುಳುವರಿಗೆ ಇದೊಂದು ಚಾರಿತ್ರಿಕ ದಿನ. ಜಗತ್ತಿನಾದ್ಯಂತ ನೆಲೆಸಿರುವ ತುಳು ಭಾಷಿಗರಲ್ಲಿ ಆತ್ಮವಿಶ್ವಾಸ ಮೂಡಿಸುವ ಮಹತ್ವದ ದಿನವಾಗಿದೆ. ತುಳು ಭಾಷೆಯ ಸಮಗ್ರ ಬೆಳವಣಿಗೆಯ ನಿಟ್ಟಿನಲ್ಲಿ ಇದು ಐತಿಹಾಸಿಕ ಹೆಜ್ಜೆಯಾಗಿದ್ದು, ಸುಮಾರು 3 ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ತುಳು ಭಾಷೆಗೆ ದೊರೆತಿರುವ ಮಹತ್ವದ ಕೊಡುಗೆಯಾಗಿದೆ,” ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ್ದ ವರದಿ ಹಾಗೂ ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಚಿಸಿದ ಅಧ್ಯಯನ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಟ್ಟ ನಿರ್ಧಾರ ಕೈಗೊಂಡು ತುಳು ಭಾಷೆಗೆ ರಾಜ್ಯದ ಅಧಿಕೃತ ಆಡಳಿತ ಭಾಷೆಯ ಮಾನ್ಯತೆ ನೀಡಿರುವುದು ಸಮಸ್ತ ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

More like this
Related

ಬಿಹಾರದ ಜಮುಯಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬಳಿಕ ಇಬ್ಬರ ಬಂಧನ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್ ತರಗತಿ ಮುಗಿಸಿಕೊಂಡು ಸ್ಕೂಟರ್‌ನಲ್ಲಿ ತೆರಳುತ್ತಿದ್ದ...

ಏಳು ದಿನಗಳ ರಾಜ ದರ್ಬಾರ್‌ಗೆ ತೆರೆ: ಭಕ್ತಿಭಾವದ ನಡುವೆ ಉಡುಪಿಯ ರಾಜನಿಗೆ ಬೀಳ್ಕೊಡುಗೆ

ಉಡುಪಿ: ಏಳು ದಿನಗಳ ಕಾಲ ಕಡಿಯಾಳಿಯಲ್ಲಿ ರಾಜ ದರ್ಬಾರ್ ನಡೆಸಿ ಸಾವಿರಾರು...

ಕಾಪು | ದನ ಕಳ್ಳತನ ಪ್ರಕರಣ: 24 ಗಂಟೆಯೊಳಗೆ ನಾಲ್ವರ ಬಂಧನ

ಕಾಪು: ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನವನ್ನು ಟೆಂಪೋದಲ್ಲಿ...

ಎಂಸಿಸಿ ಬ್ಯಾಂಕ್ 108ನೇ ವಾರ್ಷಿಕ ಮಹಾಸಭೆ: ₹10.07 ಕೋಟಿ ನಿವ್ವಳ ಲಾಭ, ಶೇ.10 ಡಿವಿಡೆಂಡ್ ಘೋಷಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025–26ನೇ ಸಾಲಿನಲ್ಲಿ ₹10.07 ಕೋಟಿ ನಿವ್ವಳ...

Copying is disabled on Udupi Digital News.