Thursday, July 2, 2026

ರೆಡ್ ಅಲರ್ಟ್ ಹಿನ್ನೆಲೆ: ನಾಳೆ(ಜುಲೈ 2) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 2 (ಗುರುವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಪೋಷಕರು ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸೂಚಿಸಲಾಗಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಆದೇಶಿಸಲಾಗಿದೆ.

ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರ, ಸಮುದ್ರ ತೀರ ಸೇರಿದಂತೆ ಅಪಾಯಕಾರಿ ಪ್ರದೇಶಗಳಿಗೆ ತೆರಳದಂತೆ ಮನವಿ ಮಾಡಲಾಗಿದೆ. ಅಲ್ಲದೆ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವ ಮೂಲಕ ಅಗತ್ಯ ಸನ್ನದ್ಧತೆ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಜಿಲ್ಲಾ ಆಡಳಿತವು ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ ಅನಗತ್ಯವಾಗಿ ಮನೆಯಿಂದ ಹೊರಗೆ ತೆರಳದಂತೆ ಹಾಗೂ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಮನವಿ ಮಾಡಿದೆ.

More like this
Related

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ...

ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯ ಆಗಬೇಕು: ಡಾ.ಶುಭಾ ಎಚ್‌.ಎಸ್‌.

ಪತ್ರಿಕಾ ದಿನಾಚರಣೆ: ಜೇಮ್ಸ್‌ ವಾಝ್‌ಗೆ ಪ್ರತಿಕಾ ದಿನದ ಗೌರವ ಉಡುಪಿ: ಸಮಾಜದ ಸಮಸ್ಯೆಗಳನ್ನು...

ಬ್ರಹ್ಮಾವರದಲ್ಲಿ ಭೀಕರ ರಸ್ತೆ ಅಪಘಾತ: ಹುಲಿ ವೇಷದ ಕಲಾವಿದ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಮಂಗಳೂರು: ನಾಗುರಿಯಲ್ಲಿ ಮನೆ ಕುಸಿದು ಮೂವರು ಮೃತ್ಯು; ಮೂವರು ಅಪಾಯದಿಂದ ಪಾರು

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ...

Copying is disabled on Udupi Digital News.