Tuesday, October 27, 2026

ಕೋಟದಲ್ಲಿ ರಸ್ತೆ ಅಪಘಾತ: ಆರ್.ಎಸ್.ಎಸ್ ಮುಖಂಡ ಗುರುದಾಸ್ ಶೆಣೈ ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಸೈಕಲ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕೋಟ ಮಣೂರು ನಿವಾಸಿ, ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ.

ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ನಲ್ಲಿ ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.

ಘಟನಾ ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More like this
Related

ʼಅರಮನೆ ಮಂಡಳಿ, ಅರಮನೆ ಜಾಗ ಸರಕಾರದ್ದುʼ : ಪ್ರಮೋದಾದೇವಿ ಒಡೆಯರ್ ಹೇಳಿಕೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿರುಗೇಟು

ಮೈಸೂರು : ʼಅರಮನೆ ಮಂಡಳಿ ಸರಕಾರದ್ದು, ಅರಮನೆ ಜಾಗವೂ ಸರಕಾರದ್ದು, ಅವರಿಗೆ...

ಗಾಜಿನ ಕಾರ್ಖಾನೆಯಲ್ಲಿ ಅವಘಡ; ಸಾಮಾಜಿಕ ಕಾರ್ಯಕರ್ತ ಸುನಿಲ್ ಬೈಲಕೆರೆ ಮೃತ್ಯು

ಉಡುಪಿ: ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಇಳಿಸುತ್ತಿದ್ದ ವೇಳೆ...

ಐದು ಕೋಟಿ ರೂ. ವೆಚ್ಚದಲ್ಲಿ ಬಂಕೇರಕಟ್ಟ ನೂತನ ಸೇತುವೆ ನಿರ್ಮಾಣದ ಕನಸು ಶೀಘ್ರ ನನಸಾಗಲಿದೆ : ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಕಲ್ಮಾಡಿ-ಕಿದಿಯೂರು ಮುಖ್ಯ ರಸ್ತೆಯಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಬಂಕೇರಕಟ್ಟ ನೂತನ...

ಪ್ರಧಾನಿ ಮೋದಿಯವರ ತಂದೆಯ ಕುರಿತು ಖರ್ಗೆ ಹೇಳಿಕೆ ಕಾಂಗ್ರೆಸ್ ಹೀನ ಮನಸ್ಥಿತಿಗೆ ಕೈಗನ್ನಡಿ : ಯಶಪಾಲ್ ಸುವರ್ಣ ಆಕ್ರೋಶ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ತಂದೆಯವರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

Copying is disabled on Udupi Digital News.