ಕಾರ್ಕಳ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಾಥ @ ಸೋಮು (40) ಎಂಬಾತನಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಕುಂಬ್ರಪದವು, ತೆಳ್ಳಾರು ರಸ್ತೆ, ಕಸಬ ಗ್ರಾಮ ನಿವಾಸಿಯಾದ ಸೋಮನಾಥನ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನಾಂಕ 30.04.2026ರಂದು ಹೊರಡಿಸಿದ ಆದೇಶದಂತೆ, ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ತಿಳಿದುಬಂದಿದೆ.




