Tuesday, September 15, 2026

ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ಆಕ್ಷೇಪಣೆ ಬಹಿರಂಗಪಡಿಸಲಿ: ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ಆಕ್ಷೇಪಣೆಗಳ ಪ್ರತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕುಂದಾಪುರ ತಾಲೂಕು ರೈತ ಸಂಘದ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯವು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ಏಳನೇ ಕರಡು ಅಧಿಸೂಚನೆಯನ್ನು ಬಿಡುಗಡೆಗೊಳಿಸಿದ್ದು, ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಮಿತಿಯನ್ನು ನಿಗದಿಪಡಿಸಿದೆ. ಈಗಾಗಲೇ ಆರು ಬಾರಿ ಕರಡು ಅಧಿಸೂಚನೆಗಳು ಹೊರಬಂದಿದ್ದರೂ, ರೈತರು ಹಾಗೂ ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳ ಪ್ರಮುಖ ಬೇಡಿಕೆಯಾಗಿರುವ ಭೌತಿಕ ಸರ್ವೇ ಕಾರ್ಯ ಮಾತ್ರ ಇದುವರೆಗೆ ನಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಸದರು ಹಾಗೂ ಶಾಸಕರು ಕೇವಲ ಅಧಿಕಾರಿಗಳನ್ನು ಕೂರಿಸಿಕೊಂಡು ಸಭೆ ನಡೆಸುವ ಕಾಟಾಚಾರವನ್ನು ನಿಲ್ಲಿಸಬೇಕು. ಸಭೆಗಳಲ್ಲಿ ಅಧಿಕಾರಿಗಳು ನೀಡುವ ಹಾರಿಕೆಯ ಉತ್ತರಗಳಿಗೆ ಸಮ್ಮತಿ ಸೂಚಿಸುವ ಬದಲು, ರಾಜ್ಯ ಸರ್ಕಾರವು ಕೇಂದ್ರಕ್ಕೆ ಸಲ್ಲಿಸಿರುವ ಆಕ್ಷೇಪಣೆಯ ಸಂಪೂರ್ಣ ಪ್ರತಿಯನ್ನು ಕೂಡಲೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೆ, ಕೇವಲ ಸಭೆಗಳನ್ನು ನಡೆಸಿ ಭರವಸೆ ನೀಡುವುದಾದರೆ, ಅದು ರೈತರು ಹಾಗೂ ಪಶ್ಚಿಮ ಘಟ್ಟ ತಪ್ಪಲು ಪ್ರದೇಶದ ನಿವಾಸಿಗಳ ಕಣ್ಣೀರೊರೆಸುವ ತಂತ್ರದ ಭಾಗವಾಗಲಿದೆ. ಇದರಿಂದ ಜನಸಾಮಾನ್ಯರ ಬೇಡಿಕೆಗಳು ಹಾಗೂ ಆಗ್ರಹಗಳು ಈಡೇರುವ ಸಾಧ್ಯತೆ ಕಡಿಮೆಯಾಗಲಿದೆ ಎಂದು ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.