Wednesday, September 30, 2026

ಉಡುಪಿಯಲ್ಲಿ ಕಳುವಾಗಿದ್ದ ಶ್ರೀ ದುರ್ಗಾಂಬಾ ಬಸ್ ಪತ್ತೆ


ಮುದರಂಗಡಿ ಸಮೀಪದ ಹಾಡಿಯಲ್ಲಿ ಬಿಟ್ಟು ಹೋಗಿದ್ದ ಬಸ್ ಪೊಲೀಸರ ವಶಕ್ಕೆ

ಉಡುಪಿ: ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ವೇಳೆ ಕಳುವಾಗಿದ್ದ ಸುಮಾರು ₹40 ಲಕ್ಷ ಮೌಲ್ಯದ ಶ್ರೀ ದುರ್ಗಾಂಬಾ ಬಸ್ನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಸ್ನ್ನು ಕಳವು ಮಾಡಿದ ಆರೋಪಿಗಳು ಮುದರಂಗಡಿ ಸಮೀಪದ ಮುದ್ದಾಡಿ ಎಂಬಲ್ಲಿನ ಹಾಡಿಯಲ್ಲಿ ಬಿಟ್ಟು ಹೋಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

KA-20-AD-1931 ನೋಂದಣಿ ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ನ್ನು ಸೆಪ್ಟೆಂಬರ್ 28ರಂದು ರಾತ್ರಿ 9.48ರ ಸುಮಾರಿಗೆ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ರಾತ್ರಿ 10 ಗಂಟೆ ಸುಮಾರಿಗೆ ಬಸ್ನ ನಿರ್ವಾಹಕ ಕೃಷ್ಣ (51) ಅವರು ಚಾಲಕ ರಾಯಿನ್ ಉಚ್ಚಿಲ ಅವರೊಂದಿಗೆ ಸ್ಕೂಟರ್ನಲ್ಲಿ ಅಲ್ಲಿಂದ ತೆರಳಿದ್ದರು.

ಸೆಪ್ಟೆಂಬರ್ 29ರಂದು ಬೆಳಗ್ಗೆ ಬಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದಾಗ ಬಸ್ ಕಾಣಿಸದಿರುವುದು ಗಮನಕ್ಕೆ ಬಂದಿದ್ದು, ಅಪರಿಚಿತ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಬಸ್ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಕೃಷ್ಣ ಅವರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳುವಾದ ಬಸ್ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು.

ತನಿಖೆಯ ವೇಳೆ, ಸೆಪ್ಟೆಂಬರ್ 29ರಂದು ಮುಂಜಾನೆ ಸುಮಾರು 2 ಗಂಟೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸ್ಕೂಟರ್ನಲ್ಲಿ ಚಿಟ್ಪಾಡಿಯ ಹನುಮಾನ್ ಗ್ಯಾರೇಜ್ಗೆ ಬಂದಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬಳಿಕ ಅವರು ಬಸ್ನ್ನು ಕಳವು ಮಾಡಿಕೊಂಡು ಹೋಗಿ ಮುದರಂಗಡಿ ಸಮೀಪದ ಮುದ್ದಾಡಿ ಎಂಬಲ್ಲಿನ ಹಾಡಿಯಲ್ಲಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ.

More like this
Related

ಬೈಂದೂರು: ಸೌಪರ್ಣಿಕಾ ನದಿ ತೀರದಲ್ಲಿ   ನೇಣು ಬಿಗಿದ ಸ್ಥಿತಿಯಲ್ಲಿ ಜೋಡಿಗಳ ಮೃತದೇಹ ಪತ್ತೆ

ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಳ ಪ್ರದೇಶದಲ್ಲಿ...

ಕಾರ್ಕಳ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ...

ಉಡುಪಿಯ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಶ್ರೀ ದುರ್ಗಾಂಬಾ ಬಸ್ ಕಳವು

ಉಡುಪಿ: ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಲಾಗಿದ್ದ ಶ್ರೀ ದುರ್ಗಾಂಬಾ...

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: ₹1.49 ಲಕ್ಷಕ್ಕಿಳಿದ 24 ಕ್ಯಾರೆಟ್ ಚಿನ್ನ

ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಎರಡು ದಿನಗಳಿಂದ ಭಾರೀ...

Copying is disabled on Udupi Digital News.