Sunday, July 5, 2026

ವಿದ್ಯಾರ್ಥಿಗಳು ದೇಶಕ್ಕೆ ಕೊಡುಗೆ ನೀಡುವ ಪ್ರಜೆಗಳಾಗಬೇಕು: ಡಾ. ರಾಜೇಂದ್ರ ಕುಮಾರ್

 ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಂಗಳೂರು: ವಿದಾರ್ಥಿಗಳು ಭವಿಷ್ಯದಲ್ಲಿ ದೇಶಕ್ಕೆ ಕೊಡುಗೆ ನೀಡುವಂತ ಪ್ರಜೆಗಳಾ ಗಬೇಕು ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕರೆ ನೀಡಿದರು.

ಅವರು ಶನಿವಾರ ಸಹಕಾರಿ ಪಿತಾಮಹ” ದಿ.ಮೊಳಹಳ್ಳಿ ಶಿವರಾವ್‌ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡುತ್ತಾ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು, “ವಿದ್ಯಾರ್ಥಿಗಳು ಇನ್ನಷ್ಟು ಬೆಳೆಯಬೇಕು, ಸಮಾಜಕ್ಕೆ ಇನ್ನಷ್ಟು ಸೇವೆ ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಅವರಿಗೆ ಪ್ರೋತ್ಸಾಹ ತುಂಬಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದೇವೆ. ನವೋದಯ ಗ್ರಾಮ ವಿಕಾಸ ಯೋಜನೆಯಲ್ಲಿ 90 ಶೇಕಡಾ ಮಹಿಳೆಯರಿದ್ದು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇಂದು ಇಲ್ಲಿ ಪುರಸ್ಕಾರ ಪಡೆದಿರುವ ಮಕ್ಕಳ ಭವಿಷ್ಯ ಉಜ್ವಲವಾಗಿರಲಿ, ಮಕ್ಕಳು ದೇಶಕಟ್ಟುವ ಕಾಯಕದಲ್ಲಿ ತೊಡಗಲಿ. ಮುಂದೆ ಕನಿಷ್ಠ ಇಬ್ಬರು ಮಕ್ಕಳಿ ಗಾದರೂ ನೆರವಾದರೆ ನಮ್ಮ ಶ್ರಮ ಸಾರ್ಥಕ“ ಎಂದರು.

2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆಯನ್ನು ನೆರವೇರಿಸಿ ಮಾತಾಡಿದ ಮಾಜಿ ಸಚಿವ ಜೆ.ಕೃಷ್ಣ ಪಾಲೇಮಾರ್ ಅವರು, “ಪ್ರತಿಭಾ ಪುರಸ್ಕಾರದಿಂದ ಇನ್ನುಳಿದ ಮಕ್ಕಳು ಕೂಡ ಪ್ರೇರೇಪಣೆ ಪಡೆಯುತ್ತಾರೆ. ವಿದ್ಯಾರ್ಥಿಗಳಿಗೆ ಪುರಸ್ಕಾರ, ಸನ್ಮಾನ ಮಾಡುವ ಉದ್ದೇಶ ನೀವು ಬೆಳೆಯುತ್ತ ದೇಶದ ಆಸ್ತಿಯಾಗಬೇಕು. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ತಮ್ಮ ಜನಪರ ಕಾರ್ಯಗಳಿಂದ ಇಂದು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರನ್ನೇ ಮೀರಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಅಪಾರವಾದುದು. ಸಹಕಾರಿ ಕ್ಷೇತ್ರದ ಕಾರ್ಯವೈಖರಿಯನ್ನು ಇಡೀ ರಾಜ್ಯಕ್ಕೆ ತೋರಿಸಿಕೊಡುವ ಮೂಲಕ ಅವರು ಶ್ಲಾಘನೀಯ ಕಾರ್ಯ ಮಾಡುತ್ತಿದ್ದಾರೆ. ಶಿಕ್ಷಣ ಮಾತ್ರವಲ್ಲದೆ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳನ್ನು ಗುರುತಿಸುವ ಮೂಲಕ ಇತರರಿಗೆ ಮಾದರಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಅವರಿಗೆ ಅಭಿನಂದನೆಗಳು“ ಎಂದರು.

ಸಮಾರಂಭದಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ದೇವಿಪ್ರಸಾದ್ ಶೆಟ್ಟಿ ಬೆಳಪು,ಭಾಸ್ಕರ್ ಕೋಟ್ಯಾನ್, ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಎಂ.ಡಿ.ಪ್ರವೀಣ್ ನಾಯ್ಕ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಬ್ಯಾಂಕ್ ನಿರ್ದೇಶಕ ಶಶಿ ಕುಮಾರ್ ರೈ ಬಾಲ್ಯೊಟ್ಟ,ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರು ಗಳಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್ , ಶಶಿಕುಮಾ‌ರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು , ಎಸ್.ಬಿ.ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು ,ಎಂ. ಮಹೇಶ್ ಹೆಗ್ಡೆ ,ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್.ಮನ್ಮಥ , ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಹೆಚ್.ಎನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಸಿಇಓ ಪ್ರವೀಣ್ ನಾಯಕ್, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ರಘು , ಎಸ್ ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕರಾದ ಸುನೀಲ್ ಕುಮಾರ್ ಹೊಳ್ಳಇವರು ಉಪಸ್ಥಿತರಿದ್ದರು.

ಎಸ್ ಸಿಡಿಸಿಸಿ ಬ್ಯಾಂಕ್ ಜನತಾ ಬಜಾರ್ ಶಾಖೆಯ ವ್ಯವಸ್ಥಾಪಕ ದೀಪಕ್ ಅವರ ಪುತ್ರ ಕನಿಶ್ ಡಿ.ಕೋಟ್ಯಾನ್ ಕ್ರೀಡಾ ಕ್ಷೇತ್ರದಲ್ಲಿ ಗೈದ ಸಾಧನೆಗೆ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಿಬ್ಬಂದಿ ಚಂದ್ರಶೇಖರ ಅವರ ಪುತ್ರಿ ಕು. ಶ್ರೀಜಾ ಸಿ. ಕೋಟ್ಯಾನ್ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ಹಾಗೂ ಯೋಗದಲ್ಲಿ ಅಪೂರ್ವ ಸಾಧನೆ ಗೈದಿರುವ ತನುಶ್ರೀ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.

ಪುರಸ್ಕಾರ: 2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ( ಒಟ್ಟು 34 ಮಂದಿ) ವಿದ್ಯಾರ್ಥಿ, ವಿದ್ಯಾರ್ಥಿನಿ ಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ 116 ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಹಾಗೂ ನವೋದಯ ಸ್ವಸಹಾಯ ಸಂಘಗಳ 161 ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು.

ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಸ್ವಾಗತಿಸಿದರು, ಸಹಾಯಕ ಮಹಾಪ್ರಬಂಧಕ ರಾಜೇಶ್ ಶೆಟ್ಟಿ ವಂದಿಸಿದರು. ಸಿಬ್ಬಂದಿ ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು. ಯೋಗಾಪ್ರತಿಭೆ ತನುಶ್ರೀ ಪಿತ್ರೋಡಿ ಅವರಿಂದ ಯೋಗ ಪ್ರದರ್ಶನ ನಡೆಯಿತು. ಚಿತ್ರಲೇಖ ಶೆಟ್ಟಿ ಪ್ರಾರ್ಥಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು.

More like this
Related

E20 ಪೆಟ್ರೋಲ್‌ನಿಂದ ಎಂಜಿನ್‌ಗೆ ಹಾನಿ ಇಲ್ಲ; ಹಳೆಯ ವಾಹನಗಳ ಮೈಲೇಜ್ ಮಾತ್ರ ಶೇ.3.5ರವರೆಗೆ ಇಳಿಕೆ: ವಾಹನ ತಯಾರಕರು

ಹೊಸದಿಲ್ಲಿ: ಪೆಟ್ರೋಲ್‌ನಲ್ಲಿ ಕಡ್ಡಾಯವಾಗಿ ಶೇ.20ರಷ್ಟು ಎಥೆನಾಲ್ (E20) ಮಿಶ್ರಣ ಮಾಡುವ ಕೇಂದ್ರ...

ಬ್ರಹ್ಮಾವರದಲ್ಲಿ ಜೀಪು ಡಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವೇಳೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ...

ಅಮಿತ್ ಶಾ ಕೋಲ್ಕತ್ತಾ ಭೇಟಿ ಮುನ್ನ ಶ್ಯಾಮ ಪ್ರಸಾದ್ ಮುಖರ್ಜಿ ಪ್ರತಿಮೆಗೆ ಧ್ವಂಸಕೃತ್ಯ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ಯಾಮ ಪ್ರಸಾದ್...

ಪ್ರಾಕೃತಿಕ ವಿಕೋಪ ಗಳನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು : ಯು ಟಿ ಖಾದರ್

ಉಡುಪಿ: ಮಳೆಗಾಲದ ಪ್ರಾಕೃತಿಕ ವಿಕೋಪ ಗಳನ್ನು ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ...

Copying is disabled on Udupi Digital News.