Wednesday, September 16, 2026

ವಿದ್ಯಾರ್ಥಿಗಳು ಸಮಗ್ರ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು: ಕೆ. ದಿವಾಕರ್

ಕುಂದಾಪುರ: ಸ್ವಾತಂತ್ರ್ಯಾನಂತರ ಹಲವು ಸವಾಲುಗಳ ನಡುವೆಯೂ ಭಾರತ ಪ್ರಜಾಪ್ರಭುತ್ವದ ಹಾದಿಯಲ್ಲಿ ಸ್ಥಿರವಾಗಿ ಮುನ್ನಡೆದು, ಬಾಹ್ಯಾಕಾಶ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ ಎಂದು ಹೈಕೋರ್ಟ್‌ನ ಹಿರಿಯ ವಕೀಲ ಕೆ. ದಿವಾಕರ್ ಹೇಳಿದರು.

ಯಡ್ಯಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯವೆಂದರೆ ಕೇವಲ ಬಂಧನದಿಂದ ಮುಕ್ತಿಯಾಗುವುದಲ್ಲ. ಸಮಾನತೆ, ಪ್ರಜಾಪ್ರಭುತ್ವದ ಹಕ್ಕುಗಳು ಹಾಗೂ ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವ ಅವಕಾಶವನ್ನು ಹೊಂದುವುದಾಗಿದೆ. ಭಾರತದ ಭವಿಷ್ಯ ರೂಪಿಸುವ ಜವಾಬ್ದಾರಿ ಇಂದಿನ ವಿದ್ಯಾರ್ಥಿಗಳ ಮೇಲಿದೆ ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ನಗರ ಪ್ರದೇಶಗಳಲ್ಲಿರುವಂತೆ ಗುಣಮಟ್ಟದ ಶಿಕ್ಷಣ ಹಾಗೂ ಸಮಾನ ಅವಕಾಶಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಪರಿಸರದಲ್ಲಿಯೇ ಗುಣಮಟ್ಟದ ಶಿಕ್ಷಣದ ವಾತಾವರಣ ನಿರ್ಮಿಸಿರುವ ವಿದ್ಯಾರಣ್ಯ ಕ್ಯಾಂಪಸ್‌ನ ಪ್ರಯತ್ನ ಶ್ಲಾಘನೀಯವಾಗಿದೆ ಎಂದು ಹೇಳಿದರು.

ನೀಟ್, ಜೆಇಇ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಅತ್ಯಗತ್ಯ. ಎಂಜಿನಿಯರಿಂಗ್‌ಗೆ ನೀಡುವಷ್ಟೇ ಆದ್ಯತೆಯನ್ನು ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಸೇರಿದಂತೆ ಮೂಲ ವಿಜ್ಞಾನಗಳಿಗೂ ನೀಡಬೇಕು. ದೇಶದ ವೈಜ್ಞಾನಿಕ ಪ್ರಗತಿಗೆ ಮೂಲ ವಿಜ್ಞಾನಗಳೇ ಬುನಾದಿ. ಯಾವುದೇ ಶಿಕ್ಷಣ ಸಂಸ್ಥೆಯ ನಿಜವಾದ ಆಸ್ತಿ ಅದರ ಬಹುಮಹಡಿ ಕಟ್ಟಡಗಳಲ್ಲ; ಅಲ್ಲಿನ ಶಿಕ್ಷಕರು. ಶಿಕ್ಷಕರು ರಾಷ್ಟ್ರ ನಿರ್ಮಾತೃಗಳಾಗಿದ್ದು, ವಿದ್ಯಾರ್ಥಿಗಳಲ್ಲಿ ಕನಸು, ಆತ್ಮವಿಶ್ವಾಸ ಹಾಗೂ ಸಾಧನೆಯ ಮನೋಭಾವ ಬೆಳೆಸುವ ಮಹತ್ವದ ಜವಾಬ್ದಾರಿ ಹೊಂದಿದ್ದಾರೆ ಎಂದರು.

ಸುಜ್ಞಾನ ಎಜ್ಯುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಹಾಗೂ ಪ್ರಕಾಶ್ ಆಚಾರ್ಯ, ಮುಖ್ಯೋಪಾಧ್ಯಾಯ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಪ್ರಾಂಶುಪಾಲೆ ಅನಿತಾ ಹಾಗೂ ಉಪ ಪ್ರಾಂಶುಪಾಲೆ ಸ್ಪೂರ್ತಿ ಉಪಸ್ಥಿತರಿದ್ದರು.

More like this
Related

ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಿರ್ಣಯಗಳು ಬಲ ನೀಡುವ ನಿರೀಕ್ಷೆ;...

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

Copying is disabled on Udupi Digital News.