Wednesday, October 14, 2026

ಭಾರತ್ ಮಾತಾ ಕೀ ಜೈ ಘೋಷಣೆ ಹಾಕಿದ ವಿದ್ಯಾರ್ಥಿಗಳ ಮೇಲೆ  ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ : ಯಶ್ಪಾಲ್ ಸುವರ್ಣ

ಉಡುಪಿ: ದಸರಾ ರಜೆಯಲ್ಲೂ ಪದವಿ ಸೆಮಿಸ್ಟರ್‌ ಪರೀಕ್ಷೆ ನಡೆಸುವ ನಿರ್ಧಾರ ವಿರೋಧಿಸಿ ಮಂಗಳೂರಿನ ಸೇಂಟ್‌ ಆಗ್ನೆಸ್‌ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ ವಿದ್ಯಾರ್ಥಿಗಳಿಗೆ ಹಲ್ಲೆ ಮಾಡಿ ಅಮಾನುಷವಾಗಿ ನಡೆದುಕೊಂಡ ಪೊಲೀಸ್ ಅಧಿಕಾರಿಯ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಕಾಂಗ್ರೆಸ್ ಪಕ್ಷದ ನಾಯಕರ ಅಣತಿಯಂತೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಪ್ರತಿಭಟನೆ ವೇಳೆ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿದ್ದು ಈ ಬಗ್ಗೆಯೂ ತನಿಖೆ ನಡೆಸಬೇಕಿದೆ.

ದೆಹಲಿಯಲ್ಲಿ ಹಿಂಸಾಚಾರದಲ್ಲಿ ತೊಡಗಿ ಪ್ರತಿಭಟನೆ ನಡೆದಾಗ ವಿದ್ಯಾರ್ಥಿಗಳ ಮೇಲೆ ಯಾಕೆ ಲಾಠಿಚಾರ್ಜ್ ಮಾಡಲಾಯಿತು ಎಂದು ನೀವು ಅಮಿತ್ ಶಾ ಅವರನ್ನು ಕೇಳಿದಿರಾ? ಮಕ್ಕಳು ಏಕೆ ಆಸ್ಪತ್ರೆಯಲ್ಲಿದ್ದಾರೆ? ಯಾಕೆ..ಈ ವಿದ್ಯಾರ್ಥಿಗಳು ಭಯೋತ್ಪಾದಕರೇ?” ಎಂದು ಬೊಬ್ಬೆ ಹಾಕಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇದೀಗ ಕಾಂಗ್ರೆಸ್ ಪಕ್ಷದ ಆಡಳಿತವಿರುವ ಕರ್ನಾಟಕದಲ್ಲಿ ಪೋಲೀಸರು ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ರೀತಿಯಲ್ಲಿ ನಡೆಸಿದ ಹಲ್ಲೆಗೆ ಮೌನ ವಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಪಾಕಿಸ್ತಾನಕ್ಕೆ ಜೈ ಎಂದವರಿಗೆ ಯಾವುದೇ ಶಿಕ್ಷೆ ಇಲ್ಲ, ಆದರೆ ಭಾರತ ಮಾತೆಗೆ ಜಯವಾಗಲಿ ಎಂದ ವಿದ್ಯಾರ್ಥಿಗಳಿಗೆ ಪೊಲೀಸರು ಹಲ್ಲೆ ಮಾಡುತ್ತಾರೆ. ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಘೋಷಣೆ ನಿಷೇಧಿಸಲಾಗಿದೆಯೇ ಎಂದು ಯಶ್ ಪಾಲ್ ಸುವರ್ಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

More like this
Related

ಅ.15ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಪ್ರವಾಸ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ (ಅ.15) ದಕ್ಷಿಣ...

ಪಾಕಿಸ್ತಾನದ ಪಂಜಾಬ್‌ನಲ್ಲಿ ರೈಲು ಹಳಿ ತಪ್ಪಿ ನಾಲ್ವರು ಸಾವು; 30ಕ್ಕೂ ಹೆಚ್ಚು ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಲ್ತಾನ್ ಜಿಲ್ಲೆಯಲ್ಲಿ ಮಂಗಳವಾರ ರೈಲು ಹಳಿ...

ದೆಹಲಿ ಪ್ರತಿಭಟನೆಯಲ್ಲಿ ಡಿಕೆಶಿಗೆ ತಳ್ಳಾಟ: ಕಾಂಗ್ರೆಸ್ ನಾಯಕತ್ವದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ಕರ್ನಾಟಕ ಮುಖ್ಯಮಂತ್ರಿ...

SIR ಬಗ್ಗೆ ಕಾಂಗ್ರೆಸ್‌ಗೆ ಸ್ಪಷ್ಟತೆಯಿಲ್ಲ: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್‌...

Copying is disabled on Udupi Digital News.