Wednesday, October 21, 2026

ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಶ್ರಮಿಸುವ ಪೊಲೀಸರ ಕಾರ್ಯ ಶ್ಲಾಘನೀಯ – ಕಿರಣ್ ಎಸ್ ಗಂಗಣ್ಣನವರ್

ಉಡುಪಿ: ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆಯ ಕಾರ್ಯ ಸರ್ವತ್ರ ಶ್ಲಾಘನೀಯವಾಗಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿಗಾಗಿ ಕಾರ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿ ಅವರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್ ಗಂಗಣ್ಣನವರ್ ಹೇಳಿದರು.

ಅವರು ಬುಧವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ ಆಯೋಜಿಸಲಾದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು. ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡುತ್ತ, ಜನರ ಸಂದಿಗ್ಧ ಹಾಗೂ ಕಷ್ಟಕಾಲದ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ನಿರ್ವಹಿಸುತ್ತಾರೆ. ತಮ್ಮ ಜೀವದ ಹಂಗು ಲೆಕ್ಕಿಸದೇ ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿ ಸ್ಥಾಪಿಸಿದಂತಹ ಪೊಲೀಸ್ರ ತ್ಯಾಗ ಮತ್ತು ಬಲಿದಾನ ಮಾಡಿದ ಪೊಲೀಸ್ ಹುತಾತ್ಮರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ದೇಶದಲ್ಲಿ ಹುತಾತ್ಮರಾದ ಪೊಲೀಸರ ಹೆಸರನ್ನು ವಾಚಿಸಿ 1959ರ ಅಕ್ಟೋಬರ್ 21ರಂದು ಲಡಾಖ್ ಸಮೀಪ ಚೀನಾ ಸೈನಿಕರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿದ ಸಿಆರ್ ಪಿಎಫ್ ನ 10 ಮಂದಿ ಪೊಲೀಸರು ವೀರಮರಣವನ್ನಪ್ಪಿದರು. 9 ಮಂದಿ ಪೊಲೀಸರು ಗಾಯಗೊಂಡು ಸೆರೆಯಾದರು. ಈ ಘಟನೆಯ ನೆನಪಿಗೆ ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ಪೊಲೀಸ್ ವಾದ್ಯವೃಂದದವರು ಅಬೈಡ್ ವಿತ್ ಗೀತೆಯನ್ನು ನುಡಿಸಿದರು. ಮೂರು ಸುತ್ತು ಗುಂಡು ಹಾರಿಸಿ, ಪೊಲೀಸ್ ಧ್ವಜವನ್ನು ಅರ್ಧ ಮಟ್ಟಕ್ಕೆ ಇಳಿಸಿ ಗೌರವ ಸಲ್ಲಿಸಲಾಯಿತು,
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ ನಾಯ್ಕ್, ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ, ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು.

More like this
Related

ಅ. 25 ರಂದು ಕೆಮ್ಮಣ್ಣುವಿನಲ್ಲಿ ನವೀಕೃತ ಲಿಟಲ್ ಫ್ಲವರ್ ಸಭಾಭವನ ಉದ್ಘಾಟನೆ

ಉಡುಪಿ: ಕೆಮ್ಮಣ್ಣು ಸಂತ ತೆರೆಸಾ ಚರ್ಚಿನ ಆಡಳಿತಕ್ಕೆ ಒಳಪಟ್ಟ ನವೀಕೃತ ಲಿಟಲ್...

ಸೆಂಗೋಲ್ ಶಿಲ್ಪಿ ವುಮ್ಮಿಡಿ ಎಥಿರಾಜ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ; ದೇಶದ ಪರಂಪರೆಗೆ ಅವರ ಕೊಡುಗೆ ಸ್ಮರಣೆ

ಚೆನ್ನೈ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ 1947ರಲ್ಲಿ ಹಸ್ತಾಂತರಿಸಲಾಗಿದ್ದ...

ಟೈಗರ್ ಶ್ರಾಫ್‌ಗೆ ಬೆದರಿಕೆ ಆಡಿಯೊ ಪರಿಶೀಲನೆ: ಬಿಷ್ಣೋಯ್ ಗ್ಯಾಂಗ್ ಧ್ವನಿ ಬ್ಯಾಂಕ್‌ಗಳ ಮೊರೆ ಹೋದ ಪೊಲೀಸರು

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್‌ಗೆ ಬೆದರಿಕೆ ಹಾಕಲಾಗಿದೆ ಎನ್ನಲಾದ ಆಡಿಯೊ...

CJP ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ತಮಿಳುನಾಡು ಮಾಜಿ ಬಿಜೆಪಿ ನಾಯಕ : ಕೆ. ಅಣ್ಣಾಮಲೈ

ಚೆನ್ನೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ...

Copying is disabled on Udupi Digital News.