Friday, October 30, 2026

ತೆಕ್ಕಟ್ಟೆ | ಎರಡು ಕಾರುಗಳ ನಡುವೆ ಅಪಘಾತ : ಕಾರು ಸಂಪೂರ್ಣ ಜಖಂ


ತೆಕ್ಕಟ್ಟೆ: ಇಲ್ಲಿನ ರಾ.ಹೆ.66 ತೆಕ್ಕಟ್ಟೆ ಕೆನರಾ ಬ್ಯಾಂಕ್ ಎದುರು ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಜಖಂಗೊಂಡ ಘಟನೆ ಫೆ.1ರಂದು ಬೆಳಗ್ಗೆ ಗಂಟೆ 11.30 ರ ಸುಮಾರಿಗೆ ಸಂಭವಿಸಿದೆ.


ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಮಾರುತಿ ಫ್ರಾಂಕ್ಷೆ ಅದೇ ಮಾರ್ಗದಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಮಾರುತಿ ಆಲ್ಲೋ’ಕೆ 10 ಕಾರೊಂದು ತೆಕ್ಕಟ್ಟೆ ರಾ.ಹೆ.66ರ ಎಡಭಾಗದ ಬಣ್ಣದಬೈಲು ಸಂಪರ್ಕ ಕಲ್ಪಿಸುವ ಒಳರಸ್ತೆಗೆ ತಿರುಗಿಸುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಬಂದು ಮಾರುತಿ ಆಲ್ಲೋ’ಕೆ 10 ಕಾರಿಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಪರಿಣಾಮ ಮಾರುತಿ ಫ್ರಾಂಕ್ಷ್ಮ ಕಾರಿನ ಏರ್ ಬ್ಯಾಗ್ ತೆರೆದಿದ್ದು ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾಗಿದೆ.


ಘಟನೆಯ ತೀವ್ರತೆಗೆ ಮಾರುತಿ ಆಲ್ಲೋ ಕೆ 10 ಕಾರಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಎರಡು ಟಯರ್ ಗಳು ಸಿಡಿದಿದೆ. ಮಾರುತಿ ಫ್ರಾಂಕ್ಸ್ ಕಾರಿನ ಚಾಲಕ ಕುಂದಾಪುರದ ನರಸಿಂಹ ಹೊಳ್ಳ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಘಟನೆ ಸಂಭವಿಸುತ್ತಿದ್ದಂತೆ ಕೋಟ ಪೊಲೀಸ್ ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.