Monday, June 22, 2026

ತೊಟ್ಟಂ| ಅಕ್ರಮ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ: ಗಾಂಜಾ, ಎಂಡಿಎಂಎ ವಶ; 7 ಮಂದಿ ಬಂಧನ

ಉಡುಪಿ: ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಗಾಂಜಾ, ಎಂಡಿಎಂಎ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ., ಪಿಎಸ್ಐ ಗಂಗಪ್ಪ ಎಸ್. ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿತು.

ದಾಳಿಯ ವೇಳೆ ಹೋಂ ಸ್ಟೇಯ ಒಂದು ಕೊಠಡಿಯಲ್ಲಿ ಇದ್ದ ಎಫ್.ಎಂ. ನಾಜೀಲ್, ಮೊಹಮ್ಮದ್ ಅಜರುದ್ದೀನ್, ಮೊಹಮ್ಮದ್ ಅಫ್ನಾನ್ ಮತ್ತು ವಿಘ್ನೇಶ್ ಎಂಬ ನಾಲ್ವರನ್ನು ಪರಿಶೀಲಿಸಿದಾಗ ಅವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಯಿತು.

ಪಂಚರ ಸಮ್ಮುಖದಲ್ಲಿ ನಡೆಸಿದ ಶೋಧನೆಯಲ್ಲಿ 33.81 ಗ್ರಾಂ ಗಾಂಜಾ (ಅಂದಾಜು ಮೌಲ್ಯ ₹3,000), 9.73 ಗ್ರಾಂ ಎಂಡಿಎಂಎ (ಅಂದಾಜು ಮೌಲ್ಯ ₹20,000), ಐದು ಮೊಬೈಲ್ ಫೋನ್ಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರ ಪ್ರಕಾರ, ಮಲ್ಪೆ ಠಾಣೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನಧಿಕೃತವಾಗಿ ಹೋಂ ಸ್ಟೇ ನಡೆಸದಂತೆ ನೋಟಿಸ್ ನೀಡಲಾಗಿದ್ದರೂ, ನಿಯಮ ಉಲ್ಲಂಘಿಸಿ ಹೋಂ ಸ್ಟೇ ನಡೆಸಲಾಗುತ್ತಿತ್ತು. ಅಲ್ಲದೆ ಮಾದಕ ವಸ್ತುಗಳ ಸೇವನೆಗೆ ಅವಕಾಶ ಕಲ್ಪಿಸಿರುವ ಆರೋಪದಡಿ ಹೋಂ ಸ್ಟೇ ಮಾಲೀಕ ಧನ್ವತ್ ರಿಕಿತ್ ಹಾಗೂ ಕೆಲಸಗಾರ ಬಸವರಾಜ್ ಅವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಜಿನಾ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

More like this
Related

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ   ಬಾಂಬ್ ಬೆದರಿಕೆ ಸಂದೇಶ

ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ...

ಉಡುಪಿ| ಅಕ್ರಮವಾಗಿ ದಂಪತಿಗೆ ಮಗು ಪೊರೈಕೆ: ಆಸ್ಪತ್ರೆ ವೈದ್ಯ ಸೇರಿ ಇಬ್ಬರ ಬಂಧನ

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು...

ಶರತ್ ಖಾರ್ವಿಯ ಕನಸಿಗೆ ಚಾಂಪಿಯನ್ ಕಿರೀಟ: ಆರ್ ಎಕ್ಸ್ ಸಲಗದ ಭಾವನಾತ್ಮಕ ಗೆಲುವು

"ಶರತ್ ಅವರ ಜನ್ಮದಿನಕ್ಕೆ, ಈ ಟ್ರೋಫಿಯೇ ನಮ್ಮ ಉಡುಗೊರೆ": ಆರ್ ಎಕ್ಸ್...

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ

ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿಕೆ ಹರಿಪ್ರಸಾದ್ ಅವರು ಭಾನುವಾರ (ಜೂನ್...

Copying is disabled on Udupi Digital News.