Saturday, September 19, 2026

ಮಣಿಪಾಲದಲ್ಲಿ 30 ಗ್ರಾಂ MDMA ಸಹಿತ ಇಬ್ಬರ ಬಂಧನ

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ತಾಲೂಕಿನ ಕಟಪಾಡಿ ಉದ್ಯಾವರ ಗ್ರಾಮದ ಅಕ್ಬರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಎಂ.ಎಸ್. ಪಾಳ್ಯದ ಸೈಯದ್ ಸುಹೇಲ್ (26) ಎಂದು ಗುರುತಿಸಲಾಗಿದೆ.

ಸೆ.17ರಂದು ಮಧ್ಯರಾತ್ರಿ 12.10ರ ಸುಮಾರಿಗೆ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಂಬಾಗಿಲು ಕಡೆಯಿಂದ ಬಂದ KA19-MK-2021 ನೋಂದಣಿಯ ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳ ಬಳಿಯಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಒಟ್ಟು 30 ಗ್ರಾಂ ತೂಕದ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ, 40 ಸಾವಿರ ರೂ. ಮೌಲ್ಯದ ನಾಲ್ಕು ಮೊಬೈಲ್‌ಗಳು, 5 ಸಾವಿರ ರೂ. ಮೌಲ್ಯದ ಒಂದು ಡಾಂಗಲ್, 9,500 ರೂ. ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿಗಳು ಬೆಂಗಳೂರಿನಿಂದ MDMA ತಂದು ಉಡುಪಿ, ಪೆರಂಪಳ್ಳಿ ಹಾಗೂ ಮಣಿಪಾಲ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರೆಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 155/2026ರಂತೆ NDPS ಕಾಯ್ದೆಯ ಕಲಂ 8(ಸಿ), 22(ಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್ ಶೆಟ್ಟಿಗಾರ್, ರಾಜೇಶ್ ಹೆರ್ಗ, ವಿಶ್ವಜಿತ್, ಸುಕುಮಾರ್ ಶೆಟ್ಟಿ, ವಿದ್ಯಾ ನಾಯಕ್, ದೀಕ್ಷಿತ್, ಉಮೇಶ್, ಲಕ್ಷ್ಮೀಶ ಹಾಗೂ ಸಲೀಂ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಕರಣದ ತನಿಖೆಯನ್ನು ಪಿಎಸ್‌ಐ ತಿಮ್ಮೇಶ್ ಬಿ.ಎನ್. ಅವರು ಕೈಗೊಂಡಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

More like this
Related

ತುಳುವಿಗೆ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ: ಪ್ರಸಾದ್ ರಾಜ್ ಕಾಂಚನ್ ಅಭಿನಂದನೆ

ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ; ತುಳು ಭಾಷೆ–ಸಂಸ್ಕೃತಿಯ...

ಭಾರತದಾದ್ಯಂತ ಆತಂಕ ಸೃಷ್ಟಿಸಲು ISI ಡಾಕ್ಸಿಂಗ್ ತಂತ್ರ: ನಾಗರಿಕರು, ಅಧಿಕಾರಿಗಳ ಗುರಿ

ನವದೆಹಲಿ: ಭಾರತೀಯ ನಾಗರಿಕರು, ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು...

ವಂದೇ ಮಾತರಂನ ಎರಡು ಚರಣಗಳ ಗಾಯನಕ್ಕೆ ಕರ್ನಾಟಕ ಬಿಜೆಪಿ ಶಾಸಕ ಆಕ್ಷೇಪ

ಶಿವಮೊಗ್ಗ (ಕರ್ನಾಟಕ): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ

ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ), ಉಚ್ಚಿಲ ಇದರ...

Copying is disabled on Udupi Digital News.