Wednesday, September 16, 2026

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ

ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಹೇಳಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಉಡುಪಿ–ಉಚ್ಚಿಲ ದಸರಾ ಸಮಿತಿಯ ಸರ್ವ ಸಮಿತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕ್ಷೇತ್ರದ ಭಕ್ತರು ಹಾಗೂ ದಾನಿಗಳ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಹಾಗೂ ಭಕ್ತಿಪೂರ್ವಕವಾಗಿ ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಉತ್ಸವವು ದೇಶ-ವಿದೇಶಗಳ ಭಕ್ತರ ಗಮನ ಸೆಳೆಯುತ್ತಿದ್ದು, ಪಂಚಮ ವರ್ಷದ ದಸರಾ ಉತ್ಸವವನ್ನು ಇನ್ನಷ್ಟು ವೈಭವದಿಂದ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಈ ವರ್ಷದ ದಸರಾ ಉತ್ಸವದಲ್ಲಿ ನಿತ್ಯ ಚಂಡಿಕಾಯಾಗ, ನಿತ್ಯ ಸಾಮೂಹಿಕ ಕುಂಕುಮಾರ್ಚನೆ, ಕಲ್ಪೋಕ್ತ ಪೂಜೆ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ವೈಭವೋಪೇತ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಶಿಷ್ಟ ವಸ್ತುಪ್ರದರ್ಶನ, ವಿದ್ಯುದ್ದೀಪಾಲಂಕಾರ, ನಿತ್ಯ ಅನ್ನಸಂತರ್ಪಣೆ ಹಾಗೂ ಸಂಜೆ ಉಪಹಾರದ ವ್ಯವಸ್ಥೆ ಇರಲಿದೆ.

ವಿಶೇಷವಾಗಿ ರಂಗೋಲಿ ಸ್ಪರ್ಧೆ, ಮಕ್ಕಳಿಗಾಗಿ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಹುಲಿಕುಣಿತ ಸ್ಪರ್ಧೆ, ಕುಣಿತ ಭಜನೆ ಹಾಗೂ ಸಾಮೂಹಿಕ ದಾಂಡಿಯಾ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಶ್ರೀ ಮಹಾಲಕ್ಷ್ಮೀ ಅಮ್ಮನವರ ಸಾನಿಧ್ಯದಲ್ಲಿ ಶ್ರೀ ಶಾರದಾ ಮಾತೆಯ ಸಹಿತ ನವದುರ್ಗೆಯರ ಆರಾಧನೆಯನ್ನು ಅತ್ಯಂತ ಭಕ್ತಿಪೂರ್ವಕವಾಗಿ ನೆರವೇರಿಸಲಾಗುವುದು. ದಸರಾ ಉತ್ಸವದ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಭಗವದ್ಭಕ್ತರು, ದಾನಿಗಳು ಹಾಗೂ ಸರ್ವರ ಸಂಪೂರ್ಣ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಸಹಕರಿಸುವಂತೆ ನಾಡೋಜ ಡಾ. ಜಿ. ಶಂಕರ್ ವಿನಂತಿಸಿದರು.

ಉದ್ಯಮಿ ಆನಂದ್ ಸಿ. ಕುಂದರ್ ಮಾತನಾಡಿ, ಬೆಲೆ ಏರಿಕೆಯಿಂದ ಕಾರ್ಯಕ್ರಮದ ಖರ್ಚು-ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಸೂಕ್ತ ಗಮನಹರಿಸಿ ಕಾರ್ಯಕ್ರಮಗಳನ್ನು ಯೋಜನಾಬದ್ಧವಾಗಿ ಸಂಯೋಜಿಸಬೇಕಾಗಿದೆ. ಈ ವರ್ಷದ ದಸರಾ ಉತ್ಸವಕ್ಕೂ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.

ದ.ಕ. ಮೊಗವೀರ ಮಹಾಜನ ಸಂಘ (ರಿ.), ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಮಾತನಾಡಿ, ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ವ ಭಕ್ತರು ಸಹಕಾರ ನೀಡುವಂತೆ ಮನವಿ ಮಾಡಿದರು.

ದಸರಾ ಸಮಿತಿ ಅಧ್ಯಕ್ಷರಾದ ವಿನಯ್ ಕರ್ಕೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್, ಮಲ್ಪೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಯಶ್ ಪಾಲ್ ಎ. ಸುವರ್ಣ, ಮೋಹನ್ ಬೆಂಗ್ರೆ , ಶರಣ್ ಕುಮಾರ್ ಮಟ್ಟು , ವಿನಯ್ ಕರ್ಕೇರ , ರಾಘವೇಂದ್ರ ಉಪಾಧ್ಯಯ, ಗಿರಿಧರ್ ಸುವರ್ಣ ಮೂಳೂರು, ಹರಿಯಪ್ಪ ಆರ್ ಕೋಟ್ಯಾನ್ , ಯುವರಾಜ್ ಸಾಲಿಯಾನ್ ಮಸ್ಕತ್ , ಸತೀಶ್ ಅಮೀನ್ ಬಾರ್ಕೂರ್ , ಉದಯ್ ಕುಮಾರ್ ಹಟ್ಟಿಯಂಗಡಿ, ರತ್ನಾಕರ್ ಸಾಲ್ಯಾನ್ ಮಲ್ಪೆ , ನಾಗರಾಜ್ ಸುವರ್ಣ ಮಲ್ಪೆ , ಶ್ರೀಪತಿ ಭಟ್ ಉಚ್ಚಿಲ , ಕವಿತಾ ಕಾಂಚನ್ , ಸುಗುಣ ಕರ್ಕೇರ , ಸುಧೀರ್ ಉಳ್ಳಾಲ , ಮನೋಜ್ ಕಾಂಚನ್ ಎರ್ಮಾಳ್ ಹಾಗೂ ಇತರರು ಉಪಸ್ಥಿತರಿದ್ದರು.

More like this
Related

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ : ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು – ರಮೇಶ್ ಕಾಂಚನ್

ಉಡುಪಿ: ಕಡಲನಗರಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ಸರ್ಕಾರದ ಆಡಳಿತವನ್ನು...

ಸೆ. 18 ರಂದು ಹೆಬ್ರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭೇಟಿ, ಕಸ್ತೂರಿ ರಂಗನ್ ವರದಿ ಕುರಿತು ಸಭೆ

ಉಡುಪಿ: ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯ...

ಸೆ. 17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೊಳ್ಕೆಬೈಲು ಕಿಶನ್...

ದ್ವಿಚಕ್ರ ವಾಹನಕ್ಕೆ ಹಾಲು ಸಾಗಾಟದ ಟ್ಯಾಂಕರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಮೃತ್ಯು

ಸ್ವಗ್ರಾಮದಲ್ಲಿ ಚೌತಿ ಹಬ್ಬ ಮುಗಿಸಿ ಊರಿಗೆ ಮರಳುತ್ತಿದ್ದ ವೇಳೆ ದುರ್ಘಟನೆ ಮಂಡ್ಯ: ದ್ವಿಚಕ್ರ...

Copying is disabled on Udupi Digital News.