Thursday, October 1, 2026

ಹದಗೆಟ್ಟ ದಾರಿದೀಪ, ಹೈಮಾಸ್ಟ್ ದೀಪಗಳ ದುರಸ್ತಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಡಿಸಿಗೆ ಮನವಿ

ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ ಮತ್ತು ಹೈಮಾಸ್ಟ್ ಲೈಟ್‌ಗಳನ್ನು ದುರಸ್ತಿಪಡಿಸಿ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ ಮಾಡಿದೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

ನಗರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ದಾರಿದೀಪಗಳು ಹಾಗೂ ಹೈಮಾಸ್ಟ್ ಲೈಟ್‌ಗಳು ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವಂತೆ ಸಮಸ್ತ ನಾಗರಿಕರ ಪರವಾಗಿ ಜಿಲ್ಲಾಡಳಿತವನ್ನು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಮೀನಾಕ್ಷಿ ಮಾಧವ ಬನ್ನಂಜೆ, ಗಣೇಶ್ ನೆರ್ಗಿ, ಸುಕೇಶ್ ಕುಂದರ್, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್‌ರಾಜ್, ಭರತ್ ಕುಮಾರ್, ರಮೇಶ್ ಪಾಲ್ ಹಾಗೂ ಸಂಜಯ್ ಆಚಾರ್ಯ ಉಪಸ್ಥಿತರಿದ್ದರು.

More like this
Related

ಅ. 2: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 125 ನೇ ವರ್ಷದ ಆಚರಣೆಗೆ ಚಾಲನೆ

ಉಡುಪಿ: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ತಾಂಗದಗಡಿ ಪ್ರಸಕ್ತ ವರ್ಷ...

ಎಂ ಆರ್ ಪಿ ಎಲ್ ನಿಂದ ಮೃತ ಕಾರ್ಮಿಕನಿಗೆ 1.20 ಕೋಟಿ ರೂ. ಪರಿಹಾರ ಘೋಷಣೆ

ಮಂಗಳೂರು: ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ...

ಉಡುಪಿಯಲ್ಲಿ ಅ. 23ರಿಂದ 25 ರ ವರೆಗೆ ಹಳೆಯ ಪಾದರಕ್ಷೆಗಳಿಗೆ ಹೊಸ ಬದುಕು ನೀಡುವ ‘ನಡಿಗೆ’ ಅಭಿಯಾನ

ಉಡುಪಿ: ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಬಡ...

ಡೀಸೆಲ್ ಬೆಲೆ ಏರಿಕೆ: ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಡೀಸೆಲ್ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯ ರಸ್ತೆ ಸಾರಿಗೆ...

Copying is disabled on Udupi Digital News.