Saturday, April 11, 2026

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆದ ಉಡುಪಿ ಜಿಲ್ಲೆ : ರಮೇಶ್ ಕಾಂಚನ್ ಹರ್ಷ

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶವು ಬಿಡುಗಡೆಯಾಗಿದ್ದು ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯು ತನ್ನ ಅಗ್ರಸ್ಥಾನವನ್ನು ಬಿಟ್ಟುಕೊಡದೇ ಶೇ. 96.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆಯಲು ಸಹಕರಿಸಿದ್ದಾರೆ. ಕಲೆ, ಸಂಸ್ಕೃತಿ ಹಾಗೂ ಧಾರ್ಮಿಕತೆಯ ಮುಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕ ವಿಭಾಗದಲ್ಲೂ ಕೂಡ ತಮ್ಮ ಅಗ್ರಸ್ಥಾನವನ್ನು ವರ್ಷಂಪ್ರತಿ ಕಾಪಾಡುತ್ತ ಬಂದಿದೆ.

ಓದಿಗಾಗಿ ತಮ್ಮ ಅಮೂಲ್ಯ ಸಮಯವನ್ನು ಮೀಸಲಿಟ್ಟು ಅತ್ಯದ್ಭುತ ಸಾಧನೆಯನ್ನು ಮಾಡಿರುವ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ಅವರ ಮುಂದಿನ ಶೈಕ್ಷಣಿಕ ಜೀವನವು ಉತ್ತಮ ಯಶಸ್ಸನ್ನು ಕಾಣಲಿ ಹಾಗೂ ಅವರನ್ನು ಪ್ರೋತ್ಸಾಹಿಸಿದ ಪೋಷಕರಿಗೆ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಕಲ್ಪಿಸಿದ ಶಿಕ್ಷಣ ಇಲಾಖೆಯ ಎಲ್ಲಾ ವರ್ಗದ ಶಿಕ್ಷಕರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.

More like this
Related

ಶಿವಮೊಗ್ಗದಲ್ಲಿ ಭೂ ಕುಸಿತ ದುರಂತ: ಮೂವರು ಕಾರ್ಮಿಕರು ಮೃತ, ತಲಾ ₹5 ಲಕ್ಷ ಪರಿಹಾರ ಘೋಷಣೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ನಲ್ಲಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಧ್ಯಮಗಳ ವಿರುದ್ಧ ಕ್ರಮ ಕೋರಿ ದರ್ಶನ್ ಅರ್ಜಿ – ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, : ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನೀಡಿರುವ...

ಚಿಕ್ಕಮಗಳೂರಿನಲ್ಲಿ ಕಾಣೆಯಾಗಿದ್ದ ಕೇರಳ ಬಾಲಕಿ ಮೃತದೇಹ ಪತ್ತೆ

ಚಿಕ್ಕಮಗಳೂರು, : ಕೇರಳದ 14 ವರ್ಷದ ಬಾಲಕಿ Srinanda ಟ್ರೆಕ್ಕಿಂಗ್ ವೇಳೆ...

Copying is disabled on Udupi Digital News.