Friday, October 30, 2026

ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಧ್ವನಿ ಪ್ರತಿಧ್ವನಿಯಾಯಿತು: ಸಚಿನ್ ಸುವರ್ಣ ಪಿತ್ರೋಡಿ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬಳಸಲಾದ ಅವಹೇಳನಕಾರಿ ಹಾಗೂ ಅಸಭ್ಯ ಪದಗಳು ದೇಶದಾದ್ಯಂತ ಕೋಟ್ಯಾಂತರ ಬಿಜೆಪಿ ಕಾರ್ಯಕರ್ತರು ಮತ್ತು ನಮೋ ಅಭಿಮಾನಿಗಳಲ್ಲಿ ಆಕ್ರೋಶವನ್ನು ಉಂಟುಮಾಡಿದ್ದವು.ಆ ಆಕ್ರೋಶವೇ ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಧ್ವನಿಯ ಮೂಲಕ ಪ್ರತಿಧ್ವನಿಸಿತು ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ತಿಳಿಸಿದ್ದಾರೆ.

ಪ್ರಧಾನಿಯವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವಾಗ, ಈ ನಕಲಿ ಗಾಂಧಿ ಪರಿವಾರದ ಅನುಯಾಯಿಗಳಿಗೆ “ಸಭ್ಯ ರಾಜಕಾರಣ” ಮತ್ತು “ಸುಸಂಸ್ಕೃತ ರಾಜಕಾರಣದ” ಮೌಲ್ಯಗಳು ಮರೆತುಹೋಗಿದ್ದವೆಯೇ?

ಕಾಕ್ರೋಚ್ ಗಳಿಗೆ ತೆರೆಯ ಹಿಂದೆ ನಿಂತು ಈ ಪ್ರತಿಭಟನೆಗೆ ನಿರ್ದೇಶನ ನೀಡುತ್ತಿದ್ದ ನಕಲಿ ಗಾಂಧಿ ಪರಿವಾರ ಹಾಗೂ ಅವರ ಬೆಂಬಲಿಗರಿಂದ ರಾಜಕಾರಣ ಕಲಿಯುವ ಪರಿಸ್ಥಿತಿ ಉಡುಪಿಯ ಶಾಸಕರಾದ ಯಶ್ಪಾಲ್ ಸುವರ್ಣ ಅವರಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.

More like this
Related

ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಹಡಗಿಗೆ ಬೆಂಕಿ

ಟೆಹರಾನ್: ಒಮಾನ್ ಕರಾವಳಿಯ ಹಾರ್ಮುಝ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ...

ಅ.31ರಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದಿಂದ ಸ್ನೇಹ ಸಮಾವೇಶ- ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು...

ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಳ ಮಾಡಲು...

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್...

Copying is disabled on Udupi Digital News.