Friday, November 13, 2026

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತಪಾತಕಿ ರವಿ ಪೂಜಾರಿಗೆ ಅನುಮತಿ

ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಗೆ ಉಡುಪಿಯ ಸ್ವಗ್ರಾಮಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ ಆರೋಪಿ ರವಿ ಪೂಜಾರಿಯನ್ನು ಶುಕ್ರವಾರ ಮಧ್ಯಾಹ್ನ ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ಉಡುಪಿಗೆ ಕರೆತರಲಾಗುತ್ತದೆ. ನವೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಮಲ್ಪೆಯಲ್ಲಿ ನಿಗದಿಯಾಗಿರುವ ತಾಯಿಯ ಅಂತ್ಯಕ್ರಿಯೆ ವಿಧಿವಿಧಾನಗಳಲ್ಲಿ ಪಾಲ್ಗೊಂಡ ಬಳಿಕ ಆತನನ್ನು ಮತ್ತೆ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.

ರವಿ ಪೂಜಾರಿಯನ್ನು ಉಡುಪಿಗೆ ಕರೆತರಲು ಅಗತ್ಯ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಕಲ್ಪಿಸುವಂತೆ ಬೆಂಗಳೂರಿನ ಆಡುಗೋಡಿಯ ಸಿಟಿ ಆರ್ಮ್ಡ್ ರಿಸರ್ವ್ (ದಕ್ಷಿಣ) ವಿಭಾಗದ ಡಿಸಿಪಿ ಹಾಗೂ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಬೆಂಗಳೂರಿನ ಜೈಲು ಇಲಾಖೆಯ ವತಿಯಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಉಡುಪಿ ಜಿಲ್ಲಾ ಪೊಲೀಸರಿಂದ ಸ್ಥಳೀಯ ಭದ್ರತೆ ಒದಗಿಸಲಾಗುತ್ತದೆ. ಎಸ್ಕಾರ್ಟ್ ವ್ಯವಸ್ಥೆಗೆ ತಗಲುವ ಸಂಪೂರ್ಣ ವೆಚ್ಚವನ್ನು ರವಿ ಪೂಜಾರಿಯೇ ಭರಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

More like this
Related

ಕೊಂಕಣ ರೈಲ್ವೆಯ ಎಲ್ಲಾ ಹಳಿಗಳನ್ನು ಡಬ್ಬಿಂಗ್ ಮಾಡುವುದು ನನ್ನ ಮಿಷನ್ : ಸಚಿವ ಅಶ್ವಿನಿ ವೈಷ್ಣವ್

ಉಡುಪಿ: ಕೊಂಕಣ ರೈಲ್ವೆಯ ಎಲ್ಲಾ ಹಳಿಗಳನ್ನು ಡಬ್ಬಿಂಗ್ ಮಾಡುವುದು ನನ್ನ ಮಿಷನ್...

ಕರ್ನಾಟಕಕ್ಕೆ ₹15,600 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳ ಕೊಡುಗೆ: ಬೆಂಗಳೂರು–ಮಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಕರ್ನಾಟಕದಲ್ಲಿ ₹15,600 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ...

ಎನ್‌ಸಿಪಿ ವಿಲೀನ ಚರ್ಚೆ ನಡುವೆ ಪುಣೆ ಪ್ರವಾಸ: ಬಿಜೆಪಿ, ಎನ್‌ಸಿಪಿ, ಶಿವಸೇನೆ ನಾಯಕರೊಂದಿಗೆ ಅಮಿತ್ ಶಾ ಮಾತುಕತೆ ಸಾಧ್ಯತೆ

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡು ಬಣಗಳ ವಿಲೀನ ಅಥವಾ...

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಿದ ಪ್ರಧಾನಿ ಮೋದಿ; ಸಿಎಂ ಶಿವಕುಮಾರ್ ಜತೆ ಮೆಟ್ರೋ ಪ್ರಯಾಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಮ್ಮ ಮೆಟ್ರೋದ ಪಿಂಕ್...

Copying is disabled on Udupi Digital News.