Thursday, April 30, 2026

ಮರಳು ಓವರ್ಲೋಡಿಂಗ್ ವಿರುದ್ಧ ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ; 13 ವಾಹನ ವಶ

ಉಡುಪಿ: ಜಿಲ್ಲೆಯಲ್ಲಿ ಮರಳು ಸಾಗಾಣಿಕೆಯಲ್ಲಿ ಹೆಚ್ಚುವರಿ ಬಾರ (ಓವರ್ಲೋಡಿಂಗ್) ಮಾಡಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ವಿರುದ್ಧ ಉಡುಪಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 13 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಏಪ್ರಿಲ್ 25 ರಂದು ಹಮ್ಮಿಕೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು ಸುಮಾರು 13 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡ ಎಲ್ಲಾ ವಾಹನಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂವಿಜ್ಞಾನ (ಮೈನ್ಸ್ ಅಂಡ್ ಜಿಯಾಲಜಿ) ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅಕ್ರಮ ಮರಳು ಸಾಗಾಣಿಕೆ ತಡೆಗೆ ಮುಂದೆಯೂ ಇಂತಹ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

More like this
Related

ಮಳೆಗೆ ತಡೆಗೋಡೆ ಕುಸಿದು 7 ಮಂದಿ ಮೃತ್ಯು : ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಧಾರಕಾರ ಮಳೆಗೆ...

2026ರ ಫಿಫಾ ವಿಶ್ವಕಪ್: ಭಾರತ, ಚೀನಾದಲ್ಲಿ ಅಧಿಕೃತ ಪ್ರಸಾರಕರಿಲ್ಲ!

ಹೊಸದಿಲ್ಲಿ : 2026ರ ಆವೃತ್ತಿಯ ಫಿಫಾ ವಿಶ್ವಕಪ್ ಟೂರ್ನಿ ಜೂನ್ 11ರಂದು...

ಭೋಪಾಲ್ | ಎಸ್‌.ಯು.ವಿಗೆ ಪಿಕಪ್ ಟ್ರಕ್ ಢಿಕ್ಕಿ; 12 ಮಂದಿ ಮೃತ್ಯು

ಭೋಪಾಲ್: ಇಂಧೋರ್-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ...

ಬೆಂಗಳೂರು: ಭಾರೀ ಮಳೆಗೆ ಕುಸಿದ ಬೌರಿಂಗ್‌ ಆಸ್ಪತ್ರೆಯ ತಡೆಗೋಡೆ; 7 ಮಂದಿ ಸಾವು ಶಂಕೆ

ಬೆಂಗಳೂರು: ನಗರದಾದ್ಯಂತ ಸಂಜೆಯಾಗುತ್ತಿದ್ದಂತೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಆಲಿಕಲ್ಲು ಮಳೆ...

Copying is disabled on Udupi Digital News.