Sunday, September 13, 2026

ಉಡುಪಿ: ಶಿಕ್ಷಣದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಆಶಾಕಿರಣ ಸ್ನೇಹ ಟ್ಯುಟೋರಿಯಲ್ ಕಾಲೇಜು

ಉಡುಪಿ: ಜಿಲ್ಲೆಯಲ್ಲಿ ಸರಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳಿದ್ದರೂ ಕಲಿಕೆಯಲ್ಲಿ ಹಿಂದೆ ಉಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಅವಕಾಶ ನೀಡುತ್ತಾ 28 ವರ್ಷಗಳಿಂದ ಕಲ್ಸಂಕದಲ್ಲಿರುವ ‘ಸ್ನೇಹ ಟ್ಯುಟೋರಿಯಲ್ ಕಾಲೇಜು’ ವಿದ್ಯಾರ್ಥಿಗಳ ಆಶಾಕಿರಣವಾಗಿದೆ.

ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯು ವಾಗ ಕೆಲವೊಮ್ಮೆ ತಪ್ಪಾದ ಸಂಯೋಜನೆ ಆರಿಸಿಕೊಳ್ಳು ತ್ತಾರೆ. ಅಂತಹ ಸಂದರ್ಭಗಳಲ್ಲಿ ಸಂಯೋಜನೆ ಬದಲಾಯಿ ಸಬೇಕಾದರೆ ಮತ್ತೆ ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಬೇಕಾ ಗುತ್ತದೆ. ಹೀಗೆ ಒಂದು ವರ್ಷ ನಷ್ಟವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಸಂಯೋಜನೆ ಬದಲಾವಣೆಯೊಂದಿಗೆ ನೇರವಾಗಿ ದ್ವಿಪಿಯುಸಿ ಪರೀಕ್ಷೆಯನ್ನು ವಾಣಿಜ್ಯ, ಕಲಾ ವಿಭಾಗದಲ್ಲಿ ಬರೆಯಲು ಅವಕಾಶ ನೀಡಿದೆ. ಕೆಲವರು ಸಂಯೋಜನೆ ಬದಲಾಯಿಸಿ ಕೊಳ್ಳದೆಮೊದಲೇಆಯ್ಕೆಮಾಡಿಕೊಂಡ ಸಂಯೋಜನೆಯಲ್ಲೇ ಶಿಕ್ಷಣ ಮುಂದುವರಿಸುವ ಅವಕಾಶವೂ ಇದೆ.

ವೈದ್ಯಕೀಯ, ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಒಳಿತು
10 ವರ್ಷಗಳಿಂದ ದ್ವಿತೀಯ ಪಿಯುಸಿಯ ನ್ನು ವಿಜ್ಞಾನ ವಿಭಾಗದಲ್ಲಿ ಕಲಿಯ ಬಯಸುವವರಿಗೆ ನ್ಯಾಶನಲ್ ಇನ್ ಸ್ಟಿ ಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ಐಒಎಸ್) ಮೂಲಕ ಪರೀಕ್ಷೆ ಬರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ವೈದ್ಯಕೀಯ, ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಇದು ಅನುಕೂಲವಾಗಿದೆ.

ಶಿಸ್ತುಬದ್ಧ ವ್ಯವಸ್ಥೆ-ತರಬೇತಿ
ಶಿಕ್ಷಣದ ಹಾದಿಯಲ್ಲಿ ಎಡವಿದ ವಿದ್ಯಾರ್ಥಿಗಳಿಗೆ ಹೊಸ ದಾರಿ ತೋರಿಸಿ ಅವರ ಬದುಕಿನಲ್ಲಿ ಚೈತನ್ಯ ತುಂಬುವಲ್ಲಿ ಯಶಸ್ವಿಯಾದ ಸಂಸ್ಥೆಯ ಶೈಕ್ಷಣಿಕ ವ್ಯವಸ್ಥೆಯು ಪ್ರತಿಷ್ಠಿತ ಶಾಲೆ, ಕಾಲೇಜುಗಳ ಮಾದರಿಯಲ್ಲಿ ನಡೆಯುತ್ತದೆ. ಬೆಳಗ್ಗೆ ಪ್ರಾರ್ಥನೆಯೊಂದಿಗೆ ತರಗತಿಗಳು ಆರಂಭವಾಗುತ್ತವೆ. ಪ್ರತಿ ತರಗತಿಗೂ ಸುಮಾರು 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ ಅಥವಾ ವಿವಿಧ ಕಾರಣ ಗಳಿಂದ 7, 8, 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಿಲ್ಲಿಸಿದ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಗೆ ಅವಕಾಶವಿದೆ. ಕನ್ನಡ, ಇಂಗ್ಲಿಷ್ ಮಾಧ್ಯಮಗಳಲ್ಲಿ ತರಗತಿಗಳು ನಡೆಯುತ್ತವೆ. 10ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ.

ಸಾಧನೆಗೆ ಪೂರಕ
ಒಂದೇ ಸೂರಿನಡಿ ಈ ಎಲ್ಲ ವ್ಯವಸ್ಥೆಗಳಿಗೆ 3,000 ಚ. ಅಡಿ ಸ್ಥಳಾವ ಕಾಶವಿದ್ದು, 12 ನುರಿತ ಉಪನ್ಯಾಸಕರು ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗಿದ್ದಾರೆ. 10ನೇ ತರಗತಿ ಅಥವಾ ಪಿಯುಸಿ ಪೂರ್ಣಗೊಳಿಸಿದ ಅನೇಕ ವಿದ್ಯಾರ್ಥಿಗಳು ಬಳಿಕ ಪ್ರತಿಷ್ಠಿತ ಕಾಲೇಜುಗಳಲ್ಲಿ ಪದವಿ ಪಡೆದು ಉತ್ತಮ ಉದ್ಯೋಗಗಳಲ್ಲಿ ತೊಡಗಿದ್ದಾರೆಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.