ಉಡುಪಿ: ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಾಗೂ ಇತರೇ ಹಬ್ಬಗಳ ಸಮಯದಲ್ಲಿ ಉಡುಪಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಅಂಗವಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವ ನಿಟ್ಟಿನಲ್ಲಿ ಡಿಸೆಂಬರ್ 24 ರಿಂದ 31 ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು ಈ ವೇಳೆ ಒಟ್ಟು 1199 ಪ್ರಕರಣಗಳನ್ನು ದಾಖಲಿಸಿಕೊಂಡು ರೂ 942600 ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಈ ವಿಶೇಷ ಕಾರ್ಯಾಚರಣೆ(Special Drive) ಅಂಗವಾಗಿ ಜಿಲ್ಲೆಯಲ್ಲಿ ಒಟ್ಟು 29 ಚೆಕ್ ಪೋಸ್ಟ್ ಗಳನ್ನು ಅಳವಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಆಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ 103
ಹೆಲ್ಮೆಟ್ ರಹಿತ ಪ್ರಯಾಣ 803
ಸಿಟ್ ಬೆಲ್ಟ್ ಧರಿಸದೆ ವಾಹನ ಚಲಾವಣೆ 243
ಟ್ರಿಪಲ್ ರೈಡಿಂಗ್ 35
ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ 15
ಒಟ್ಟು 1199 ಪ್ರಕರಣಗಳು ದಾಖಲಾಗಿದ್ದು ರೂ 942600 ದಂಡ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




