Tuesday, June 23, 2026

ಉಡುಪಿ| ಅಕ್ರಮವಾಗಿ ದಂಪತಿಗೆ ಮಗು ಪೊರೈಕೆ: ಆಸ್ಪತ್ರೆ ವೈದ್ಯ ಸೇರಿ ಇಬ್ಬರ ಬಂಧನ


ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಘಟನೆಗೆ ಸಂಬಂಧಿಸಿ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ಡಾ। ಸುರೇಂದ್ರ ಕ್ಯಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತ್ತರರ ವಿರುದ್ದ ಪ್ರಕರಣ ದಾಖಲಾ ಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧಿಸಲಾಗಿದೆ ಬಂಧಿಸಲಾಗಿದೆ

ಮಾಹಿತಿ ಮೇರೆಗೆ ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕಿ ಸವಿತಾ ಅವರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ `ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಇದನ್ನಾಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ಸವಿತಾ ಅವರೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ. ಪತಿ ಪ್ರಕಾಶ್, ಒಂದು ‘ ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದು ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು. ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿತರು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.

ಆರೋಪಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳು ಇರದ ಹಿನ್ನೆಲೆ ನಗರದ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆ ಸಂದರ್ಭ ನರ್ಸಿಂಗ್ ಹೋಮ್ನಲ್ಲಿ ಮಗುವೊಂದು ಇರುವ ವಿಚಾರ ಲಕ್ಷ್ಮೀ ಅವರಿಗೆ ತಿಳಿದು ಬಂದಿತ್ತು. ಪ್ರಕಾಶ್ ಮತ್ತು ಪೂರ್ಣಿಮಾ ಅಲ್ಲಿನ ವೈದ್ಯರನ್ನು ಭೇಟಿಯಾಗಿ ಮಗುವನ್ನು ನೀಡುವಂತೆ ಕೇಳಿಕೊಂಡಿದ್ದರು. ವೈದ್ಯರು ದಂಪತಿಗೆ ಒಂದು ತಿಂಗಳ ಹಿಂದೆ ಜನಿಸಿದ್ದ ಯಾರದ್ದೋ ಹೆಣ್ಣು ಮಗುವನ್ನು ಕೊಟ್ಟಿದ್ದರು.

ಮಗುವಿನ ಅಧಿಕೃತ ಪೋಷಕರು ಯಾರು ಎಂದು ತಿಳಿದಿಲ್ಲ. ಮಗುವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲಎಂದು ಆರೋಪಿ ದಂಪತಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದರು. ಈ ಬಗ್ಗೆ ಜೂ. 20ರಂದು ಪ್ರಕರಣ ದಾಖಲಾಗಿತ್ತು.

More like this
Related

ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿ ಹೊಸ ಅಧ್ಯಕ್ಷರನ್ನು ಘೋಷಿಸಿದ ಟಿಎಂಸಿ ಬಂಡಾಯ ಬಣ

ಕೊಲ್ಕಾತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು...

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ...

ಸಂಕಲ್ಪ ಸಮಾವೇಶ ಕಾರಣ ನೀಟ್ ಪರೀಕ್ಷೆ ವಂಚಿತರಾಗಿದ್ದರೆ ಅಂತಹ ವಿದ್ಯಾರ್ಥಿಗಳ ನಷ್ಟ ಭರಿಸಲು ಸಿದ್ಧ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸರಣಿ ತಪ್ಪು ಮಾಹಿತಿ ನೀಡುವ ಬೆಂಗಳೂರಿನ ಸಂಸದರು ಮತ್ತೊಮ್ಮೆ ತಪ್ಪು...

Copying is disabled on Udupi Digital News.