Monday, September 14, 2026

ಉಡುಪಿ: ಕಂಟೈನರ್ ಲಾರಿಯ ಚಕ್ರದಡಿಗೆ ಸಿಲುಕಿ ಯುವಕ ಮೃತ್ಯು

ಉಡುಪಿ: ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ಸಂಜೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.


ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ.


ಉಡುಪಿಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಕಂಟೈನರ್ ಲಾರಿಯು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು ಇದರಿಂದ ನಿಯಂತ್ರಣ ತಪ್ಪಿದ ಅವಿನಾಶ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರ ಪರಿಣಾಮ ಲಾರಿಯ ಚಕ್ರವು ಸವಾರದ ತಲೆಯ ಮೇಲೆ ಹರಿಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಸ್ಥಳಕ್ಕೆ ಉಡುಪಿ ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.