Monday, September 14, 2026

ಉಳ್ಳಾಲ: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದ ಇಬ್ಬರ ಬಂಧನ

ಮಂಗಳೂರು:  ಇಲ್ಲಿನ ಬಾರ್ ಒಂದರಲ್ಲಿ ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರನ್ನು  ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ ( 31) ಹಾಗೂ ಮಂಚಿಲ ನಿವಾಸಿ, ಅಶ್ವಕ್ (28)ಬಂಧಿತರು.

ಬಂಧಿತರ ಪೈಕಿ ಶಾಕಿರ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರೆ, ಅಶ್ವಕ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ತಡರಾತ್ರಿ ಸುಮಾರು 12.15ರ ಸುಮಾರಿಗೆ ಈ ಇಬ್ಬರು ತೊಕ್ಕೊಟ್ಟಿನಲ್ಲಿ ಬಾರ್ ಒಂದರ ಬಳಿ ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕವಾಗಿ ಓಡಾಡಿ, ಜನರಿಗೆ ಬೆದರಿಕೆ ಹಾಕುತ್ತಿದ್ದರು.

ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತಲವಾರು ಬಳಕೆ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.