Tuesday, September 15, 2026

ವೆನಿಜುವೆಲಾ ಮೇಲೆ ಅಮೇರಿಕಾ ದಾಳಿ: ಸಿಪಿಎಂ ಪ್ರತಿಭಟನೆ

ಸಾರ್ವಭೌಮ ರಾಷ್ಟ್ರದ ಮೇಲಿನ ದಾಳಿ ಖಂಡನೀಯ: ಸುರೇಶ್ ಕಲ್ಲಾಗರ್

ಕುಂದಾಪುರ: ಸಾಮ್ರಾಜ್ಯಶಾಹಿ ಅಮೇರಿಕಾ ಸಮಾಜವಾದಿ ವೆನಿಜುವೆಲಾ ದೇಶದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ  ಸಾರ್ವಭೌಮ ರಾಷ್ಟ್ರದ ಮೇಲೆ ದಾಳಿ ನಡೆಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಭಾನುವಾರ ಇಲ್ಲಿನ ಹಂಚು ಕಾರ್ಮಿಕರ ಭವನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ವೆನಿಜುವೆಲಾ ದೇಶದಲ್ಲಿನ ತೈಲ ಸಂಪತ್ತನ್ನು ಲೂಟಿ ಹೊಡೆಯಲು ಅಮೇರಿಕಾದ ಸಂಚಿನ ಭಾಗವಾಗಿ ವೆನಿಜುವೆಲಾ ಮೇಲೆ ದಾಳಿ ನಡೆಸಿ ಅಲ್ಲಿನ ಅಧ್ಯಕ್ಷರಾದ ಮಡುರೊ ಮತ್ತು ಅವರ ಪತ್ನಿ ಯನ್ನು ಬಂಧಿಸಿರುವುದು ಶಾಂತಿ ಬಯಸುವ ಎಲ್ಲರೂ ವಿರೋಧಿಸಬೇಕು ಎಂದು ಹೇಳಿದರು.

ಯುದ್ದದಾಹಿ, ದರೋಡೆಕೋರ ನೀತಿಯ ಅಮೇರಿಕಾ ಅಧ್ಯಕ್ಷ ತನ್ನ ವೈಫಲ್ಯಗಳನ್ನು ಮುಚ್ಚಿಡಲು ಸಮಾಜವಾದಿ ವೆನಿಜುವೆಲಾ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಕೂಡಲೇ ವೆನಿಜುವೆಲಾ ಅಧ್ಯಕ್ಷರು ಹಾಗೂ ಅವರ ಪತ್ನಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ಭಾರತ ಸರ್ಕಾರ ಅಮೇರಿಕಾದ ಗೊಡ್ಡು ಬೆದರಿಕೆಗೆ ಮಣಿಯದೇ ವೆನಿಜುವೆಲಾ ಪರ ನಿಲ್ಲಬೇಕು ಎಂದು ಅವರು ಆಗ್ರಹಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್ ನರಸಿಂಹ ಮಾತನಾಡಿ; ಅಮೇರಿಕಾದ ಅಧ್ಯಕ್ಷ ಟ್ರಂಪ್ ನೀತಿಗಳು ಭಾರತ ದೇಶದ ದುಡಿಯುವ ವರ್ಗದ ಜನಜೀವನದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಜಗತ್ತಿನಲ್ಲಿ ಉಕ್ರೇನ್, ರಷ್ಯಾ, ಹಾಗೂ ಇಸ್ರೇಲ್  ಪ್ಯಾಲೇಸ್ತೈನ್ ಮೇಲೆ ನಡೆಸುತ್ತಿರುವ ದಾಳಿ ಸಾಮ್ರಾಜ್ಯಶಾಹಿ ಅಮೇರಿಕಾವೇ ನಡೆಸುತ್ತಿದೆ. ಮುಂದೆ ಭಾರತ ಅಮೇರಿಕಾದ ಷರತ್ತುಗಳಿಗೆ ಒಪ್ಪದಿದ್ದರೆ ನಮ್ಮ ದೇಶದ ಮೇಲೂ ದಾಳಿಯಾಗುವ ಅಪಾಯವಿದೆ ಎಂದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಶಶಿಧರ ಗೊಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಶೀಲಾವತಿ, ಬಲ್ಕೀಸ್, ಕುಂದಾಪುರ ತಾಲೂಕು ಸಮಿತಿ ಸದಸ್ಯ ಚಿಕ್ಕ ಮೊಗವೀರ, ಸಂತೋಷ್ ಹೆಮ್ಮಾಡಿ, ಅಣ್ಣಪ್ಪ ಅಬ್ಬಿಗುಡ್ಡಿ, ರಾಮಚಂದ್ರ ನಾವಡ ಮೊದಲಾದವರಿದ್ದರು.

https://www.facebook.com/share/v/16xFHpaGS1/



More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.