Wednesday, September 16, 2026

ಉಡುಪಿ ಜಿಲ್ಲಾಸ್ಪತ್ರೆ ಸೇರಿ ಪ್ರಮುಖ ಯೋಜನೆಗಳಿಗೆ ಅನುದಾನ: ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಕ್ಕೆ ಯಶ್‌ಪಾಲ್ ಸುವರ್ಣ ಒತ್ತಾಯ

ಉಡುಪಿ: ಪ್ರಥಮ ಬಾರಿಗೆ ಕರಾವಳಿ ಭಾಗದ ಮಂಗಳೂರಿನಲ್ಲಿ ದಿನಾಂಕ ಸೆಪ್ಟೆಂಬರ್ 18 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿ ಕರ್ನಾಟಕದ ಜನತೆಗೆ ಹೆಮ್ಮೆಯ ವಿಷಯ ಹಾಗೂ ಐತಿಹಾಸಿಕ ಕ್ಷಣವಾಗಿದೆ. ಈ ಸಂಪುಟ ಸಭೆಯಲ್ಲಿ ಉಡುಪಿಯ ಪ್ರಮುಖ ಬೇಡಿಕೆಗಳಾದ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ, ವೈದ್ಯಕೀಯ ಉಪಕರಣಗಳು ಹಾಗೂ ಪೂರ್ಣ ಪ್ರಮಾಣದಲ್ಲಿ ಆಸ್ಪತ್ರೆ ಕಾರ್ಯಾಚರಿಸಲು ಅಗತ್ಯ ಸಿಬ್ಬಂದಿ ಮಂಜೂರಾತಿ ನೀಡಲು ನಿರ್ಣಯ ಕೈಗೊಂಡು, ಶೀಘ್ರವಾಗಿ ಆಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಒದಗಿಸಲು ಕ್ರಮ ವಹಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

ಅಲ್ಲದೇ, ಉಡುಪಿಯ ಪ್ರಮುಖ ಬೇಡಿಕೆಗಳಾದ ಕೃಷಿ ಪದವಿ ಕಾಲೇಜು ಸ್ಥಾಪನೆ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾತಿ, ಸರಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಪ್ರೋತ್ಸಾಹ, ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ, ಶಾಲೆಗಳಿಗೆ ಅನುದಾನ, ಪ್ರಾಕೃತಿಕ ವಿಕೋಪಕ್ಕೆ ಅನುದಾನ, ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ, ಬರ ಪರಿಹಾರಕ್ಕೆ ಅನುದಾನ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ, ಮಳೆಯಿಂದ ಹಾನಿಗೊಳಗಾದ ವಾಸದ ಮನೆಗಳ ಮಳೆಹಾನಿಗೆ ವೈಯಕ್ತಿಕ ಪರಿಹಾರ ಮಂಜೂರಾತಿ ನೀಡುವಂತೆ ಮಾಡಿದ್ದಾರೆ.

ಸರ್ಕಾರಿ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸಿಗುವ ಸೇವೆಗಳು ಕ್ಲಪ್ತ ಸಮಯದಲ್ಲಿ ಸಿಗುವಂತಾಗಲು ಅಗತ್ಯ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮ, ಶಾಲಾ ಕಾಲೇಜು ಮಕ್ಕಳಿಗೆ ಅನುಕೂಲವಾಗುವಂತೆ ಸರಕಾರಿ ಬಸ್ ಸೌಲಭ್ಯ, ವಿವಿಧ ನಿಗಮ ಮಂಡಳಿಗಳಿಗೆ ಹೆಚ್ಚಿನ ಅನುದಾನ ಒದಗಿಸುವುದು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಹಾ ಯೋಜನೆ ಅಂತಿಮಗೊಳಿಸುವುದು ಹಾಗೂ ಶ್ರೀ ಕೃಷ್ಣ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಉಡುಪಿಯ ಸಮಸ್ತ ಜನತೆಯ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

More like this
Related

ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದ ಸಚಿವ ಕೆ.ಎಸ್. ಬಸವಂತಪ್ಪ ರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸ್ವಾಗತ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು...

‘ತಂಡ ಸಂಪೂರ್ಣ ಸಿದ್ಧವಾಗಿದೆ’: ಏಷ್ಯಾಡ್‌ನಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವ ಗುರಿ ಹೊಂದಿರುವ ಭಾರತ ಮಹಿಳಾ ಕಬಡ್ಡಿ ತಂಡ

ನವದೆಹಲಿ: 2026ರ ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕಬಡ್ಡಿ ತಂಡವು...

ICC ರ‍್ಯಾಂಕಿಂಗ್: ಅಫ್ಘಾನಿಸ್ತಾನ ವಿರುದ್ಧದ ಸರಣಿ ಬಳಿಕ ಅಭಿಷೇಕ್ 2ನೇ ಸ್ಥಾನಕ್ಕೆ

ದುಬೈ: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ...

ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ: ಪ್ರಸಾದ್ ರಾಜ್ ಕಾಂಚನ್

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಿರ್ಣಯಗಳು ಬಲ ನೀಡುವ ನಿರೀಕ್ಷೆ;...

Copying is disabled on Udupi Digital News.