ಮಂಗಳೂರು: ನಗರದ ಹೊಯ್ಗೆ ಬಜಾರ್ ಸಮೀಪ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಬೋಳಾರ ಫರ್ರಿರೋಡ್ ನಿವಾಸಿ ಪ್ರಿಯಾಂಶು ಬೋಳಾರ್ (24) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಜೂನ್ 30ರಂದು ಸಂಜೆ 4 ಗಂಟೆ ಸುಮಾರಿಗೆ ಬೋಳಾರ ಪ್ರದೇಶದಲ್ಲಿ ಪ್ರಿಯಾಂಶು ಮಾದಕ ವಸ್ತು ಸೇವಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




