Tuesday, June 23, 2026

ಉದ್ಯಾವರ ಪಾಪನಾಶಿನಿ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.

ಮೃತ ಯುವಕನನ್ನು ಉದ್ಯಾವರ ಪಿತ್ರೋಡಿ ನಿವಾಸಿ ರಮೇಶ್ ಮತ್ತು ಪ್ರಮೋದಿನಿ ಶೆಟ್ಟಿಯವರ ಪುತ್ರ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ.

ಮೃತ ಹರ್ಷಿತ್ ಮಂಗಳವಾರ ಬೆಳಿಗ್ಗೆ 5 ಗಂಟೆಗೆ ಬೋಳಾರುಗುಡ್ಡೆ ಮೈದಾನದಲ್ಲಿ ಕ್ರಿಕೆಟ್ ಆಡಲು ತೆರಳುವುದಾಗಿ ಹೇಳಿದ್ದು ಬಳಿಕ ಮನೆಗೆ ವಾಪಾಸಾಗಿರಲಿಲ್ಲ. ಆತನ ಮೊಬೈಲ್ ಸ್ವಿಚ್ಚ್ ಆಫ್ ಆಗಿದ್ದು ದ್ವಿಚಕ್ರ ವಾಹನ ಸೇತುವೆಯ ಮೇಲೆ ಪತ್ತೆಯಾಗಿತ್ತು.

ಇದರಿಂದ ಗಾಬರಿಗೊಂಡ ಸ್ಥಳೀಯರು ಹಾಗೂ ಮುಳುಗುತಜ್ಞ ಈಶ್ವರ ಮಲ್ಪೆ ನದಿಯಲ್ಲಿ ಹುಡುಕಾಟ ನಡೆಸಿದ್ದು ಸಂಜೆಯ ವೇಳೆಗೆ ಹರ್ಷಿತ್ ಮೃತದೇಹ ಪತ್ತೆಯಾಗಿದೆ.

ಮೃತ ಹರ್ಷಿತ್ ಮಲ್ಪೆಯ ಸೊಸೈಟಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More like this
Related

ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿ ಹೊಸ ಅಧ್ಯಕ್ಷರನ್ನು ಘೋಷಿಸಿದ ಟಿಎಂಸಿ ಬಂಡಾಯ ಬಣ

ಕೊಲ್ಕಾತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು...

ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ...

ಸಂಕಲ್ಪ ಸಮಾವೇಶ ಕಾರಣ ನೀಟ್ ಪರೀಕ್ಷೆ ವಂಚಿತರಾಗಿದ್ದರೆ ಅಂತಹ ವಿದ್ಯಾರ್ಥಿಗಳ ನಷ್ಟ ಭರಿಸಲು ಸಿದ್ಧ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸರಣಿ ತಪ್ಪು ಮಾಹಿತಿ ನೀಡುವ ಬೆಂಗಳೂರಿನ ಸಂಸದರು ಮತ್ತೊಮ್ಮೆ ತಪ್ಪು...

Copying is disabled on Udupi Digital News.