Tuesday, September 15, 2026

ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ 9ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ: ನಗರದ ವೆಂಕಟರಮಣ ದೇವಾಲಯದ ಕೆರೆಯಲ್ಲಿ ಮುಳುಗಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಬೆಳ್ಳಂಪಳ್ಳಿಯ ಕುಕ್ಕೆಹಳ್ಳಿ ನಿವಾಸಿ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ (14) ಮೃತ ವಿದ್ಯಾರ್ಥಿ.

ವೆಂಕಟರಮಣ ದೇವಾಲಯದಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸ್ನಾನಕ್ಕಾಗಿ ಕೆರೆಗೆ ಇಳಿದಿದ್ದ ಆದಿತ್ಯ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ರಕ್ಷಣಾ ತಂಡದವರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು.

ಖ್ಯಾತ ಈಜುಪಟು ಈಶ್ವರ್ ಮಲ್ಪೆ ನೇತೃತ್ವದ ತಂಡ ಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಯನ್ನು ಪತ್ತೆಹಚ್ಚಿ ನೀರಿನಿಂದ ಮೇಲಕ್ಕೆತ್ತಿತು.

ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆ ಕುರಿತು ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More like this
Related

 ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರ ಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ

ಉಡುಪಿ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ...

ಇತರರಿಗೆ ಸಹಾಯ ಮಾಡುವ ಪ್ರತಿಯೊಬ್ಬರಲ್ಲಿ ದೇವರನ್ನು ಕಾಣಬಹುದು : ಬಿಷಪ್ ಲೆಸ್ಲಿ ಸಿ ಡಿಸೋಜಾ

ಉಡುಪಿ: ನಾವು ಕಣ್ಣಿನಿಂದ ದೇವರನ್ನು ನೋಡದೇ ಇದ್ದರೂ, ಕಷ್ಟಕಾಲದಲ್ಲಿ ನಮಗೆ ಸಹಾಯ...

ಬಿಜೆಪಿ ಅಭ್ಯರ್ಥಿಗೆ ಕೇವಲ 1 ಮತ, ಆಘಾತಕಾರಿ ಫಲಿತಾಂಶ: ಹೆಂಡತಿ, ಅಪ್ಪ, ಅಮ್ಮನ ವೋಟ್ ಯಾರಿಗೆ?

ಜೈಪುರ: ರಾಜಸ್ಥಾನ ನಾಗರಿಕ ಚುನಾವಣೆಯ ಫಲಿತಾಂಶದ ನಡುವೆ ಆಘಾತಕಾರಿ ಮತ್ತು ಆಸಕ್ತಿದಾಯಕ...

Copying is disabled on Udupi Digital News.