Thursday, May 21, 2026

ಕೋಡಿಬೆಂಗ್ರೆ ಸಮುದ್ರದಲ್ಲಿ ಬೋಟು ಮುಳುಗಡೆ: ಆರು ಮಂದಿ ಮೀನುಗಾರರ ರಕ್ಷಣೆ

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.

ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್ ಮೊಗೇರ, ಶಾಮ ಸುಂರ್ದ ಮಲೀಕ್, ಉಜ್ವಲ್ ಮಲೀಕ್, ಸತ್ಯಜಿತ್ ಮಲೀಕ್, ತ್ರಿಲೇಶ್ ಭಾಸ್ಕರ್ ರಕ್ಷಿಸಲ್ಪಟ್ಟ ಮೀನುಗಾರರು.

ಕಿದಿಯೂರು ಪಡುಕರೆಯ ಸಂದೀಪ್ ಕುಮಾರ್ ಎಂಬವರಿಗೆ ಸೇರಿದ ಸಾಯಿದತ್ತ ಆಳಸಮುದ್ರ ಬೋಟು ಮೇ 17ರಂದು ರಾತ್ರಿ 10-30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮೇ 19ರಂದು ಕೋಡಿಬೆಂಗ್ರೆ ನೇರ ಸಮುದ್ರದಲ್ಲಿ 38 ಮೀಟರ್ ಆಳ ದೂರದಲ್ಲಿ ಸಂಜೆ 4-30ರ ವೇಳೆ ಬೋಟಿನ ಹಿಂಭಾಗದ ಅಡಿಭಾಗಕ್ಕೆ ಯಾವುದೋ ವಸ್ತು ತಾಗಿದ ಶಬ್ದ ಕೇಳಿ ಬಂತು. ಈ ವೇಳೆ ತಾಂಡೇಲ ರಾಘವೇಂದ್ರ ಬೋಟಿನ ಒಳಗೆ ಕೆಳಗಿಳಿದು ನೋಡಿದಾಗ ನೀರು ಒಳ ಬರುತ್ತಿರುವುದು ಕಂಡು ಬಂತು.

ತಕ್ಷಣ ಸಮೀಪದದಲ್ಲಿರುವ ಬೋಟ್ ಶ್ರೀಅಮ್ಮ ಭವಾನಿ ಬೋಟಿನ ಸಹಾಯ ಪಡೆದು ಬೋಟಿನೊಳಗೆ ತುಂಬುತ್ತಿದ್ದ ನೀರನ್ನು ಖಾಲಿ ಮಾಡಲು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ. ಬೋಟಿನಲ್ಲಿದ್ದ ಎಲ್ಲ ಮೀನುಗಾರನ್ನು ತಮ್ಮ ಬೋಟಿಗೆ ಹತ್ತಿಸಿ, ಮುಳುಗಡೆಗೊಳ್ಳುತ್ತಿರುವ ಬೋಟನ್ನು ಮಲ್ಪೆ ಬಂದರಿಗೆ ಎಳೆದು ತರುವಾಗ ಅಮ್ಮ ಭಾವಾನಿ ಬೋಟಿನ ಹಿಂಭಾಗದ ಕಂಬ ತುಂಡಾಗಿ ಬೋಟು ಸುಮಾರು 11 ಗಂಟೆ ವೇಳೆಗೆ ಸಂಪೂರ್ಣವಾಗಿ ಮುಳಗಡೆ ಗೊಂಡಿತು. ಬೋಟಿನಲ್ಲಿದ್ದ ಮೀನು, ಬಲೆ, ಡಿಸೇಲ್ ಸೇರಿದಂತೆ ಸುಮಾರು 65 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

More like this
Related

ಅತಿ ವೇಗಕ್ಕೆ ಕಡಿವಾಣ ಹಾಕಲು ಜಿಲ್ಲೆಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ

ಉಡುಪಿ: ಜಿಲ್ಲೆಯಲ್ಲಿ ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡಿದರೆ ಜೋಕೆ! ಇನ್ನುಂದೆ...

ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ

ಮಂಗಳೂರು : ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ...

ದೇಶದಲ್ಲಿ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಕೊರತೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆ...

ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ತನಿಖೆ ಆರಂಭ

ಬೆಂಗಳೂರು: ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಾ ಭಾಗಕಾಲಿಕವಾಗಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ...

Copying is disabled on Udupi Digital News.