Monday, September 14, 2026

ಮಾಜಿ ಪಾಕಿಸ್ತಾನ ಕ್ರಿಕೆಟಿಗನ ಪುತ್ರನ ಮೇಲೆ ಅತ್ಯಾಚಾರ ಆರೋಪ

ಕರಾಚಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ಖಾದಿರ್ ಅವರ ಪುತ್ರ ಸುಲೇಮಾನ್ ವಿರುದ್ಧ ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ಥ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ದೂರು ನೀಡಿದ ಬಳಿಕ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿಗಳು ಆರೋಪವನ್ನು ದೃಢಪಡಿಸಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಯ ವರದಿ ಪ್ರಕಾರ, ಸಂತ್ರಸ್ಥ ಮಹಿಳೆ ಸುಲೇಮಾನ್ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನೆಪವೊಡ್ಡಿ ಆರೋಪಿಯು ಆಕೆಯನ್ನು ತನ್ನ ತೋಟದ ಮನೆಗೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಆ ವೇಳೆ ಆಕೆ ವಿರೋಧ ವ್ಯಕ್ತಪಡಿಸಿದರೂ ಆರೋಪಿಯು ದೌರ್ಜನ್ಯ ಮುಂದುವರಿಸಿದ್ದಾನೆ ಎಂದು ತಿಳಿಸಲಾಗಿದೆ.

ದೂರು ದಾಖಲಾದ ತಕ್ಷಣ ಆರೋಪಿಯಾದ ಸುಲೇಮಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಇನ್ನು ಆರೋಪಿ ಸುಲೇಮಾನ್ ಸ್ವತಃ ಕ್ರಿಕೆಟಿಗನಾಗಿದ್ದು, 2005ರಿಂದ 2013ರವರೆಗೆ 26 ಪ್ರಥಮ ದರ್ಜೆ ಪಂದ್ಯಗಳು ಮತ್ತು 40 ಲಿಸ್ಟ್ ಎ ಪಂದ್ಯಗಳಲ್ಲಿ ಭಾಗವಹಿಸಿದ್ದರು. ಅವರ ತಂದೆ ಅಬ್ದುಲ್ ಖಾದಿರ್ ಪಾಕಿಸ್ತಾನದ ಶ್ರೇಷ್ಠ ಲೆಗ್ ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿದ್ದು, 67 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.