Friday, October 30, 2026

ಕುಂದಾಪುರ : ಅಕ್ರಮ ಕೊಜೆ ಮಣ್ಣು ಸಾಗಾಟದ ಟಿಪ್ಪರ್ ಅಪಘಾತ ಪ್ರಕರಣ: ಮೂವರ ಬಂಧನ

ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ; ಯುವ ಕಾಂಗ್ರೆಸ್ ಮುಖಂಡ ಸಹಿತ ಮೂವರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ವಿಷ್ಣುಮೂರ್ತಿ ದೇವಸ್ಥಾನದ ಬಳಿ ಎರಡು ಟಿಪ್ಪರ್ ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಟಿಪ್ಪರ್ ಚಾಲಕರು ಹಾಗೂ ಕೋಜೆ ಮಣ್ಣು ತೆಗೆದ ಸ್ಥಳದ ಮಾಲೀಕ ಸೇರಿದಂತೆ ಮೂವರನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಟಿಪ್ಪರ್ ಚಾಲಕರಾದ ನಾಗರಾಜ, ರತ್ವೀಜ್ ಹಾಗೂ ಮಣ್ಣು ತೆಗೆದ ಸ್ಥಳದ ಮಾಲೀಕ ಅಜಿತ್ ಶೆಟ್ಟಿ ಎಂದು ಗುರುತಿಸಲಾಗಿದೆ.

ರಾಜ್ಯ ಹೆದ್ದಾರಿ 52ರಲ್ಲಿ ಕುಂದಾಪುರ ಕಡೆಯಿಂದ ಎರಡು ಟಿಪ್ಪರ್ ಲಾರಿಗಳು ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಸಂಚರಿಸುತ್ತಿದ್ದವು. ಈ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸನ್ನು ಕಂಡು   ಟಿಪ್ಪರ್ ಚಾಲಕ ವೇಗ ಕಡಿಮೆ ಮಾಡಿದ್ದಾನೆ. ಹಿಂದಿನಿಂದ ಬರುತ್ತಿದ್ದ   ಮತ್ತೊಂದು ಟಿಪ್ಪರ್ ಲಾರಿ ಅತಿವೇಗದಿಂದ ಬಂದು ಮೊದಲ ಟಿಪ್ಪರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಬಲಭಾಗಕ್ಕೆ ಚಲಿಸಿದೆ. ಈ ವೇಳೆ ಕಂಡ್ಲೂರಿನಿಂದ ಬಸ್ರೂರು ಕಡೆಗೆ ಕಾಲೇಜಿಗೆ ತೆರಳುತ್ತಿದ್ದ   ಸಂಖ್ಯೆಯ ಸ್ಕೂಟರ್‌ಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಸ್ಕೂಟರ್ ಸವಾರರಾದ ಟಿ.ಕೆ. ಮೊಹಮ್ಮದ್ ಶಯಾನ್ ಮತ್ತು ಮೊಹಮ್ಮದ್ ರಯಾನ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಕಾರಣವಾದ ಟಿಪ್ಪರ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಕೋಜೆ ಮಣ್ಣನ್ನು ತುಂಬಿಕೊಂಡು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

More like this
Related

ರಾಜ್ಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ವಿವಿಧ ಕ್ಷೇತ್ರಗಳ 71 ಸಾಧಕರ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ–2026ಕ್ಕೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ...

ಅಂಡರ್-19 ಏಷ್ಯಾಕಪ್‌ಗೆ ಭಾರತದ ತಂಡ ಪ್ರಕಟ: ಸೆಹ್ವಾಗ್ ಪುತ್ರ ಆರ್ಯವೀರ್, ದ್ರಾವಿಡ್ ಪುತ್ರ ಅನ್ವಯ್‌ಗೆ ಸ್ಥಾನ

ನವದೆಹಲಿ: ಒಮಾನ್‌ನ ಮಸ್ಕತ್‌ನಲ್ಲಿ ನವೆಂಬರ್ 5ರಿಂದ 14ರವರೆಗೆ ನಡೆಯಲಿರುವ ಎಸಿಸಿ ಪುರುಷರ...

ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದ ಅರ್ಷದೀಪ್ ಸಿಂಗ್: 150 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್

ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ಎಡಗೈ ವೇಗಿ...

Copying is disabled on Udupi Digital News.