Monday, September 14, 2026

ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಹತ್ಯೆ ಪ್ರಕರಣ: ಆರೋಪಿ ಟೆಟ್ಸುಯಾ ಯಮಗಾಮಿಗೆ ಜೀವಾವಧಿ ಶಿಕ್ಷೆ

ಟೋಕಿಯೋ/ನಾರಾ, ಜ.21: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಹತ್ಯೆ ಪ್ರಕರಣದಲ್ಲಿ ಆರೋಪಿ ಟೆಟ್ಸುಯಾ ಯಮಗಾಮಿಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ. 2022ರ ಜುಲೈ 8ರಂದು ನಾರಾ ನಗರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಅಬೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಗುಂಡೇಟಿನಿಂದ ತೀವ್ರ ರಕ್ತಸ್ರಾವವಾಗಿದ್ದ ಅಬೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಮೃತಪಟ್ಟಿದ್ದರು.

ಈ ಪ್ರಕರಣವು ಜಪಾನ್‌ನಲ್ಲಿ ದಶಕಗಳ ಬಳಿಕ ನಡೆದ ಮೊದಲ ರಾಜಕೀಯ ಹತ್ಯೆಯಾಗಿದ್ದು, ದೇಶದ ರಾಜಕೀಯ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ನಾರಾ ಸಿಟಿಯ ನಿವಾಸಿಯಾಗಿರುವ 41 ವರ್ಷದ ಟೆಟ್ಸುಯಾ ಯಮಗಾಮಿ, ಅಕ್ಟೋಬರ್‌ನಲ್ಲಿ ಆರಂಭವಾದ ವಿಚಾರಣೆಯ ವೇಳೆ ಕೊಲೆಗೆ ತಪ್ಪೊಪ್ಪಿಕೊಂಡಿದ್ದ. ತಾನು ದ್ವೇಷಿಸುತ್ತಿದ್ದ ಯೂನಿಫಿಕೇಶನ್ ಚರ್ಚ್‌ಗೆ ಮಾಜಿ ಪ್ರಧಾನಿ ಅಬೆ ಬೆಂಬಲ ಹೊಂದಿದ್ದಾರೆ ಎಂಬ ನಂಬಿಕೆಯಿಂದ ಈ ಕೃತ್ಯ ಎಸಗಿದ್ದೇನೆ ಎಂದು ಆರೋಪಿ ಹೇಳಿದ್ದ. ಅಬೆ ಅವರು ಆ ಸಂಘಟನೆಗೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ವೀಡಿಯೊ ಸಂದೇಶ ಕಳುಹಿಸಿದ್ದನ್ನು ನೋಡಿದ ನಂತರ ಕೋಪ ಉಕ್ಕಿ ಬಂದಿತ್ತೆಂದು ಯಮಗಾಮಿ ನ್ಯಾಯಾಲಯಕ್ಕೆ ತಿಳಿಸಿದ್ದ.

ಶಿಂಜೊ ಅಬೆ ಜಪಾನ್‌ನ ಅತಿ ಹೆಚ್ಚು ಅವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ನಾಯಕರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರು 2006–07 ಹಾಗೂ 2012ರಿಂದ 2020ರವರೆಗೆ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಧಾನಮಂತ್ರಿ ಹುದ್ದೆಯಿಂದ ಹೊರಬಂದ ಬಳಿಕವೂ ಅವರು ಸಕ್ರಿಯ ಶಾಸಕರಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದರು.

ನ್ಯಾಯಾಲಯ, ಈ ಕೃತ್ಯವನ್ನು “ಅತೀ ಗಂಭೀರ ಹಾಗೂ ಸಮಾಜವನ್ನು ಬೆಚ್ಚಿಬೀಳಿಸುವ ಅಪರಾಧ”ವೆಂದು ಪರಿಗಣಿಸಿ, ಆರೋಪಿ ಯಮಗಾಮಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.