Sunday, September 13, 2026

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ

ಉಡುಪಿ ಡಿಜಿಟಲ್ ನ್ಯೂಸ್ ಡಾಟ್ ಕಾಮ್
ಪ್ಯಾರೀಸ್: ಇರಾನ್‌ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಇರಾನ್‌ ಸರ್ಕಾರ ದೇಶದಾದ್ಯಂತ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದರೂ ಉದ್ವಿಗ್ನತೆ ತಣ್ಣಗಾಗಿಲ್ಲ.

ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.

ಸ್ಥಳೀಯ ವರದಿಗಳ ಪ್ರಕಾರ, ರಾಜಧಾನಿ ಟೆಹ್ರಾನ್‌ನ ವಿವಿಧ ಆಸ್ಪತ್ರೆಗಳಲ್ಲಿ ಕನಿಷ್ಠ 200ಕ್ಕೂ ಹೆಚ್ಚು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯೇ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಟೆಹ್ರಾನ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಏಕಾಏಕಿ ಗುಂಡಿನ ಮಳೆ ಸುರಿಸಿದ್ದು, 30ಕ್ಕೂ ಹೆಚ್ಚು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆ ವ್ಯಾಪಕವಾಗುತ್ತಿದ್ದಂತೆ, ಸರ್ಕಾರ ದೇಶಾದ್ಯಂತ ಇಂಟರ್ನೆಟ್ ಮತ್ತು ದೂರವಾಣಿ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಆದರೂ ಹೋರಾಟಗಳು ಇನ್ನೂ ಮುಂದುವರೆದಿವೆ ಎಂದು ತಿಳಿದುಬಂದಿದೆ.

ಆರ್ಥಿಕತೆ ಕುಸಿತದಿಂದಾಗಿ ಡಿ.28ರಂದು ತೆಹ್ರಾನ್‌ ನಲ್ಲಿ ಆರಂಭವಾದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ʼಸರ್ವಾಧಿಕಾರಿಗೆ ಸಾವಾಗಲಿʼ ಹಾಗೂ ಖಮೇನಿ ನಾಶವಾಗಲಲಿ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ.

ಈ ನಡುವೆ ಇರಾನ್‌ ಪ್ರತಿಭಟನಾಕಾರರನನ್ನು ಹಿಂಸಾತ್ಮಕವಾಗಿ ಕೊಂದರೆ ಅಮೆರಿಕಾ ಮಧ್ಯಪ್ರವೇಶಿಸಿ ಅವರ ರಕ್ಷಣೆಗೆ ಮುಂದಾಗಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿಕೆಯನ್ನು ನೀಡಿದ್ದು, ಯುದ್ದಕ್ಕೆ ಸಿದ್ದ ಎಂಬ ಸಂದೇಶ ನೀಡಿದ್ದಾರೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.