Sunday, September 13, 2026

ಶೀಘ್ರವೇ ಭಾರತಕ್ಕೆ ವಾಪಾಸಾಗಿ: ಇರಾನ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಕೇಂದ್ರ ಸರಕಾರ ಸೂಚನೆ

ಯುಡಿ ನ್ಯೂಸ್ ಡಾಟ್ ಕಾಮ್

ಹೊಸದಿಲ್ಲಿ/ಟೆಹ್ರಾನ್‌: ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆಯ ಕಿಚ್ಚು ಹಾಗೂ ಅಮೆರಿಕದಿಂದ ಇರಾನ್‌ ಮೇಲೆ ದಾಳಿ ಸಾಧ್ಯತೆ ಹೆಚ್ಚಿದ ನಡುವೆಯೇ ಅಲ್ಲಿರುವ ಭಾರತೀಯರಿಗೆ ಕೂಡಲೇ ತವರಿಗೆ ಮರಳುವಂತೆ ಭಾರತ ಸರಕಾರ ಸೂಚಿಸಿದೆ.

ಭಾರತೀಯ ನಾಗರಿಕರು ಮುಂಜಾಗ್ರತೆ ವಹಿಸಬೇಕು. ಪ್ರತಿಭಟನೆ ನಡೆಯುವ ಸ್ಥಳಗಳಿಗೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಎಲ್ಲ ನಾಗರಿಕರು ಪಾಸ್‌ಪೋರ್ಟ್‌, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳು ಸುಲಭವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಯಾವುದೇ ಸಹಾಯಕ್ಕಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ. ಅಂದಾಜಿನ ಪ್ರಕಾರ, ವಿದ್ಯಾರ್ಥಿಗಳು ಸೇರಿದಂತೆ 10,000 ಭಾರತೀಯರು ಇರಾನ್‌ನಲ್ಲಿ ನೆಲೆಸಿದ್ದಾರೆ. ಅಂತರ್ಜಾಲ ಸಂಪರ್ಕ ಕಡಿತ ಅಥವಾ ಬೇರೆ ಕಾರಣದಿಂದ ಭಾರತೀಯರು ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸಾಧ್ಯವಾಗದಿದ್ದರೆ, ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ಸಚಿವಾಲಯ ಸಲಹೆ ನೀಡಿದೆ.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.