Sunday, September 13, 2026

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಅಮೆರಿಕ

ವಾಷಿಂಗ್ಟನ್: ಸಿರಿಯಾದಲ್ಲಿ ಐಸಿಸ್ ಉಗ್ರರ ತಾಣಗಳನ್ನು ಗುರಿ ಮಾಡಿ ಅಮೆರಿಕ ಸೇನೆ ಹಾಗೂ ಮಿತ್ರಪಡೆಗಳು ಶನಿವಾರ ದೊಡ್ಡ ಪ್ರಮಾಣದ ವಾಯುದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಪ್ರಕಟಿಸಿದೆ. ಐಸಿಸ್ ಉಗ್ರರು ಕಳೆದ ತಿಂಗಳು ದಾಳಿ ನಡೆಸಿ ಮೂವರು ಅಮೆರಿಕನ್ನರನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ವಿವರಿಸಿದೆ.

ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12.30ರ ವೇಳೆಗೆ ಈ ದಾಳಿ ನಡೆಸಲಾಗಿದ್ದು, ಅಮೆರಿಕದ ಸೇನೆಯ ಜತೆಗೆ ಪಾಲುದಾರ ದೇಶಗಳ ಸೇನೆ ಕೂಡಾ ದೇಶಾದ್ಯಂತ ಹಲವು ಐಸಿಸ್ ತಾಣಗಳ ಮೇಲೆ ದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಸ್ಪಷ್ಟಪಡಿಸಿದೆ.

‘ಆಪರೇಷನ್ ಹಾಕ್‌ಐ ಸ್ಟ್ರೈಕ್” ಹೆಸರಿನಲ್ಲಿ ನಡೆದ ಕಾರ್ಯಾಚರಣೆಯ ಮುಂದವರಿದ ಭಾಗವಾಗಿ ಈ ದಾಳಿ ನಡೆದಿದೆ. 2025ರ ಡಿಸೆಂಬರ್ 19ರಂದು ಡೊನಾಲ್ಡ್ ಟ್ರಂಪ್ ನಿರ್ದೇಶನದಲ್ಲಿ ದಾಳಿ ನಡೆದಿತ್ತು. ಅಮೆರಿಕ ಹಾಗೂ ಸಿರಿಯಾ ಪಡೆಗಳನ್ನು ಗುರಿ ಮಾಡಿ 2025ರ ಡಿಸೆಂಬರ್ 13ರಂದು ಸಿರಿಯಾದ ಪಲ್ಮ್ಯಾರಾದಲ್ಲಿ ಐಸಿಸ್ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಳಿಯಲ್ಲಿ ಇಬ್ಬರು ಅಮೆರಿಕನ್ ಸೈನಿಕರು ಮತ್ತು ಒಬ್ಬ ಭಾಷಾಂತರಕಾರ ಹತರಾಗಿದ್ದರು. ಲೋವಾ ನ್ಯಾಷನಲ್ ಗಾರ್ಡ್ ನ ಇತರ ಮೂವರು ಗಾಯಗೊಂಡಿದ್ದರು.

More like this
Related

ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತ : ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಕಾನೂನು...

ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಜ್ರ ಮಹೋತ್ಸವದ ಸಂಭ್ರಮ

ವಜ್ರ ಮಹೋತ್ಸವದ ಅಂಗವಾಗಿ ‘ರಾಜ ದರ್ಬಾರ್’ ವೇದಿಕೆ ನಿರ್ಮಾಣ ಉಡುಪಿ: ಕಡಿಯಾಳಿ ಸಾರ್ವಜನಿಕ...

ಕರಾವಳಿ ಸಚಿವ ಸಂಪುಟ ಸಭೆ: ₹5,000 ಕೋಟಿ ವಿಶೇಷ ಪ್ಯಾಕೇಜ್ ಸೇರಿ ಪ್ರಮುಖ ಬೇಡಿಕೆಗಳಿಗೆ ಶಾಸಕ ಮಂಜುನಾಥ್ ಭಂಡಾರಿ ಮನವಿ

ಮಂಗಳೂರು: ಕರಾವಳಿ ಭಾಗದ ಸುದೀರ್ಘ ಬೇಡಿಕೆಗಳು ಹಾಗೂ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ...

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ

ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್...

Copying is disabled on Udupi Digital News.