Monday, September 14, 2026

ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲಾ ಮೇಲೆ ಹೆಚ್ಚುವರಿ ಸುಂಕ: ಕೇಂದ್ರ ಸರಕಾರದಿಂದ ಅಧಿಸೂಚನೆ

ಹೊಸದಿಲ್ಲಿ: ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾದ ಮೇಲೆ ಹೊಸ ಸೆಸ್ ಅನ್ನು ವಿಧಿಸಲಾಗುವುದು ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ.

ತಂಬಾಕು ಮತ್ತು ಪಾನ್ ಮಸಾಲಾದ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚುವರಿಯಾಗಿ ಇರುತ್ತವೆ. ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್‌ಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ಶೇಕಡಾ 40ರಷ್ಟು ಜಿಎಸ್‌ಟಿ ದರವನ್ನು ವಿಧಿಸಲಾಗುವುದು. ಬೀಡಿಗಳಿಗೆ ಶೇಕಡಾ 18ರಷ್ಟು ಸರಕು ಮತ್ತು ಸೇವಾ ತೆರಿಗೆ ಅನ್ವಯವಾಗಲಿದೆ ಎಂದು ಸರಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಇದರ ಜೊತೆಗೆ, ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುತ್ತದೆ. ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲಾಗುತ್ತದೆ.

ಡಿಸೆಂಬರ್‌ನಲ್ಲಿ ಸಂಸತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ಮತ್ತು ತಂಬಾಕಿನ ಮೇಲೆ ಅಬಕಾರಿ ಸುಂಕ ವಿಧಿಸಲು ಅನುಮತಿಸುವ ಎರಡು ಮಸೂದೆಗಳನ್ನು ಅಂಗೀಕರಿಸಿತ್ತು.

ಈ ತೆರಿಗೆಗಳು ಫೆಬ್ರವರಿ 1ರಿಂದ ಅನುಷ್ಠಾನಕ್ಕೆ ಬರಲಿದೆ ಎಂದು ಸರಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

ಬಳ್ಳಾರಿ ಚಲೋ ನಡೆಸಿದ್ದ ಬಿಜೆಪಿ ನಾಯಕರಿಗೆ ಶಾಕ್; ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ಮೇಲೆ FIR

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವನ್ನು ಖಂಡಿಸಿ...

Copying is disabled on Udupi Digital News.