Monday, September 14, 2026

ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

ಉಡುಪಿ ಡಿಜಿಟಲ್ ನ್ಯೂಸ್ ಡಾಟ್
ಲಕ್ನೋ:  ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ಅಯೋಧ್ಯೆ ಜಿಲ್ಲಾಡಳಿತ ಸಂಪೂರ್ಣವಾಗಿ ನಿಷೇಧಿಸಿದೆ.  

ಅಯೋಧ್ಯೆ ಪಟ್ಟಣ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಆಹಾರ ವಿತರಣಾ ಸಂಸ್ಥೆಗಳು ಮಾಂಸಾಹಾರ ಪೂರೈಸುತ್ತಿವೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಪಟ್ಟಣದ ಹೋಟೆಲ್‌ಗಳು ಮತ್ತು ಹೋಮ್‌ಸ್ಟೇಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಅತಿಥಿಗಳಿಗೆ ಮಾಂಸಾಹಾರ ಹಾಗೂ ಮದ್ಯ ವಿತರಿಸದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ.Advertisement: 0:09

ಅಯೋಧ್ಯೆ ಮತ್ತು ಫೈಜಾಬಾದ್ ಸಂಪರ್ಕಿಸುವ ಮಾರ್ಗವಾದ 14 ಕಿಮೀ ʻರಾಮ ಪಥʼದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲು ಅಯೋಧ್ಯೆ ಪುರಸಭೆ ಮೇ 2025 ರಲ್ಲಿ ನಿರ್ಧಾರ ತೆಗೆದುಕೊಂಡಿತ್ತು. ಆದರೆ 9 ತಿಂಗಳು ಕಳೆದರೂ ಈ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿರಲಿಲ್ಲ. ಇದರಿಂದ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳು ಈ ಪ್ರದೇಶದಲ್ಲಿ ಮದ್ಯ ಮಾರಾಟ ಮಾಡುತ್ತಿವೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಸಹಾಯಕ ಆಯುಕ್ತ ಮಾಣಿಕ್ ಚಂದ್ರ ಸಿಂಗ್, ಫೈಜಾಬಾದ್‌ನ ರೋಸ್ ಸೇರಿದಂತೆ ರಾಮ್ ಪಥ್‌ ನಾದ್ಯಂತದ ಮಾಂಸದ ಅಂಗಡಿಗಳನ್ನ ಸಿವಿಐಸಿ ಸಂಸ್ಥೆ ತೆಗೆದುಹಾಕಿದೆ. ನಿಷೇಧದ ಹೊರತಾಗಿಯೂ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರವಾಸಿಗರಿಗೆ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುವುದು ಮುಂದುವರಿದಿದೆ ಎಂಬ ದೂರು ಕೇಳಿಬಂದಿತ್ತು. ದೂರುಗಳ ನಂತರ, ಆನ್‌ಲೈನ್‌ನಲ್ಲಿ ಮಾಂಸಾಹಾರಿ ಆಹಾರ ವಿತರಣೆಗೂ ನಿಷೇಧ ಹೇರಲಾಗಿದೆ. ಎಲ್ಲಾ ಹೋಟೆಲ್‌, ಮಳಿಗೆಗಳಿಗೂ ಸೂಚನೆ ನೀಡಲಾಗಿದೆ. ಕ್ರಮ ಜಾರಿಯಾಗಿರುವ ಬಗ್ಗೆ ಮತ್ತೆ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

More like this
Related

ಉಡುಪಿ ಉಚ್ಚಿಲ ದಸರಾ-2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದಲ್ಲಿರುವ ಉಚ್ಚಿಲ ಶ್ರೀಮಹಾಲಕ್ಷ್ಮೀ...

ಕಡಿಯಾಳಿಯಲ್ಲಿ ವಜ್ರಮಹೋತ್ಸವದ ಸಂಭ್ರಮ: ಸಂಕಷ್ಟ ಹರ ಗಣಪತಿಯ ಅದ್ಧೂರಿ ಮೆರವಣಿಗೆ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ, ಕಡಿಯಾಳಿ ವತಿಯಿಂದ ಆಯೋಜಿಸಲಾಗಿರುವ 60ನೇ...

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ: ಸಮಾಜಘಾತುಕ ಶಕ್ತಿಗಳ ಬಳಕೆ – ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: "ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ಬಿಜೆಪಿ ಸಮಾಜ ಘಾತುಕ...

Copying is disabled on Udupi Digital News.